ಬಂಟ್ವಾಳ: ಕೋವಿಡ್-19 ನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣವಿಫಲವಾಗಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಶೇಖರ ಪೂಜಾರಿ ಟೀಕಿಸಿದ್ದಾರೆ.
ಕೊರೋನಾ ಮಹಾಮಾರಿಯಿಂದಾಗಿ ದ.ಕ.ಜಿಲ್ಲೆ ಸೇರಿದಂತೆ ಕರ್ನಾಟಕದ ಜನತೆ ಸಾವು,ನೋವು ಮಾತ್ರವಲ್ಲ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರೆ, ರಾಜ್ಯ ಸರಕಾರ ಪಿಪಿಇ ಕಿಟ್,ಹಾಸಿಗೆ ಖರೀದಿ ಹಗರಣದಲ್ಲಿ ತೊಡಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ. ದ.ಕ.ಜಿಲ್ಲೆ ಸಹಿತ ರಾಜ್ಯದಲ್ಲಿ ಕೊರೋನ ಸೋಂಕು ದಿನೇದಿನೇ ಹೆಚ್ಚುತ್ತಿದ್ದು,ಜನಸಾಮಾನ್ಯರು ಆತಂಕಕ್ಕೀಡಾಗಿದ್ದು,ಇದನ್ನು ಹತ್ತಿಕ್ಕಲು ಸರಕಾರ ಸೂಕ್ತ ಕ್ರಮಕೈಗೊಳ್ಳಬೇಕು,ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿಯವರಿಗೆ ಕೊಲೆ ಬೆದರಿಕೆ ಒಡ್ಡಿರುವುದನ್ನು ಖಂಡಿಸಿರುವ ಅವರು ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಕೃತ್ಯವಾಗಿದೆ. ಕೊರೋನ ವಿರುದ್ದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾಧಿಕಾರಿಯವರನ್ನು ಹಠಾತ್ತನೇ ವರ್ಗಾಹಿಸಿರುವುದು ಸರಿಯಲ್ಲ,ಇದು ಒರ್ವ ದಕ್ಷ ಅಧಿಕಾರಿಣಿಗೆ ಸರಕಾರ ಮಾಡಿರುವ ಅವಮಾನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment on "ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ, ಡಿಸಿ ವರ್ಗಾವಣೆ ಸರಿಯಲ್ಲ: ಚಂದ್ರಶೇಖರ ಪೂಜಾರಿ"