ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಆಡಳಿತದ ರಾಜ್ಯ ಸರ್ಕಾರದ ಸಾಧನೆಗಳ ಮಾಹಿತಿಯುಳ್ಳ ಕರಪತ್ರವನ್ನು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಗುರುವಾರ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಬಿಡುಗಡೆಗೊಳಿಸಿದರು.
ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಜುಲೈ 26 ರಂದು ಒಂದು ವರ್ಷ ಪೂರೈಸಿದ್ದು, ಈ ಸಂದರ್ಭ ಪ್ರತಿ ಮನೆಗಳಿಗೂ ಸಾಧನೆಯ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಸಂಕಷ್ಟ ಸವಾಲುಗಳ ನಡುವೆ ಸಂವೇದನೆ ಸ್ಪಂದನೆ ಸಾಧನೆ, ಜನಹಿತದ ಕಾಳಜಿಯ ಸರಕಾರದ ಸಾಧನೆಯನ್ನು ಅರಿಯೋಣ ಮನೆಮನೆಗೆ ಸಾರೋಣ ಸಹಕಾರಿಗಳಾಗೋಣ ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ವಿಚಾರವುಳ್ಳ ಕರಪತ್ರವಿದು ಎಂದು ಹೇಳಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಕ್ಷೇತ್ರದ ಉಪಾಧ್ಯಕ್ಷರಾದ ಚಿದಾನಂದ ರೈ. ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ. ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಯಶೋಧರ ಕರ್ಬೆಟ್ಟು, ಪ್ರಮುಖರಾದ ರಂಜಿತ್ ಮೈರ. ಜಿನರಾಜ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…