ವಿಟ್ಲ ಸಮೀಪ ಉಕ್ಕುಡ ದರ್ಬೆ ಎಂಬಲ್ಲಿ ಗುರುವಾರ ಗ್ಯಾಸ್ ಸಿಲಿಂಡರ್ ನಲ್ಲಿ ಸೋರಿಕೆಯಾಗಿದ್ದು ಈ ವೇಳೆ ಬೆಂಕಿ ಆಕಸ್ಮಿಕ ಉಂಟಾದ ಘಟನೆ ನಡೆದಿದೆ. ಯೂಸೂಫ್ ಎಂಬವರ ಮನೆಯಲ್ಲಿ ಘಟನೆ ಸಂಭವಿಸಿದ್ದು, ಸಿಲಿಂಡರ್ ಅಳವಡಿಸಲು ಮುಚ್ಚಳ ತೆಗೆಯುತ್ತಿದ್ದಂತೆ ಗ್ಯಾಸ್ ಸೋರಿಕೆಯಾಗಿದೆ. ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರ ಸಹಾಯದಿಂದ ನಂದಿಸಲಾಯಿತು. ಈ ವೇಳೆ ಮನೆಮಂದಿ ಹೊರಗೆ ಬಂದ ಕಾರಣ ಹೆಚ್ಚಿನ ಅಪಾಯ ತಪ್ಪಿತು. ವಿದ್ಯುತ್ ಸಂಪರ್ಕ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನಿತರ ವಿದ್ಯುತ್ ಉಪಕರಣಗಳು ಕೂಡಾ ಕರಕಲಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…