ಲೊರೆಟ್ಟೋ ಚರ್ಚ್ ನೂತನ ಧರ್ಮಗುರು ವಂ.ಫ್ರಾನ್ಸಿಸ್ ಕ್ರಾಸ್ತ ಅವರಿಗೆ ಸ್ವಾಗತ

ಜಾಹೀರಾತು

ಬಂಟ್ವಾಳ:ಲೊರೆಟ್ಟೋ ಚರ್ಚ್ ಧರ್ಮಗುರುಗಳಾಗಿ ಆಗಮಿಸಿದ ವಂ.ಫ್ರಾನ್ಸಿಸ್ ಕ್ರಾಸ್ತ ಅವರನ್ನು ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತಿಸಲಾಯಿತು. ಬಂಟ್ವಾಳ ವಲಯ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯನ್ ಡಿಸೋಜ ಹಾಗೂ ಲೊರೆಟ್ಟೊ ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷರಾದ ಐಸಾಕ್ ವಾಸ್ ಹೂಗುಚ್ಛ ನೀಡಿ ಸ್ವಾಗತಿಸಿದರು.

ಧರ್ಮಗುರುಗಳ ಸೇವಾ ಸ್ಥಾನದ ಪಾರ್ಥನ ವಿಧಿಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಪ್ರತಿನಿಧಿಯಾಗಿ ಬಂಟ್ವಾಳ ವಲಯದ ಪ್ರಧಾನ ಧರ್ಮಗುರುಗಳಾದ ಹಾಗೂ ಮೊಡಂಕಾಪು ಚರ್ಚಿನ ಧರ್ಮಗುರುಗಳಾದ ವಂ. ವಲೇರಿಯನ್ ಡಿಸೋಜ ನೆರವೇರಿಸಿದರು. ಅಭಿನಂದನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನ ಧರ್ಮಗುರುಗಳು, ತಮ್ಮ ಸೇವಾವಧಿಯಲ್ಲಿ ಚರ್ಚಿನ ಸರ್ವತೋಮುಖ ಅಭಿವೃದ್ಧಿಗೆ ಶುಭ ಹಾರೈಸಿ, ಧರ್ಮಗುರುಗಳಾಗಿ ಸೇವೆ ಸಲ್ಲಿಸಿ ಪಾಲಡ್ಕ ಚರ್ಚಿಗೆ ವರ್ಗಾವಣೆಗೊಂಡ ವಂದನೀಯ ಎಲ್ಯಾಸ್  ಡಿಸೋಜ ಸೇವೆಯನ್ನು ಸ್ಮರಿಸಿದರು. ನೂತನ ಧರ್ಮಗುರುಗಳಾದ ಸೇವಾ ಸ್ಥಾನವನ್ನು ಸ್ವೀಕರಿಸಿ ಮಾತನಾಡಿದ ವಂ.ಫ್ರಾನ್ಸಿಸ್ ಕ್ರಾಸ್ತಾ, ಯೇಸುಕ್ರಿಸ್ತರು ತಮ್ಮ ಶಿಷ್ಯರಿಗೆ ನೀಡಿದ  ಬೋಧನೆಗಳ ನೆನಪಿಸಿ, ಅವರ ಆದರ್ಶ, ತ್ಯಾಗಮಯ ಜೀವನವನ್ನು ಸಮುದಾಯ ದಲ್ಲಿ ಅಳವಡಿಸಿ ಒಂದು ಕುಟುಂಬದ ಸದಸ್ಯರಂತೆ ಚರ್ಚ್ ನ ಉತ್ತಮ ಏಳಿಗೆಗೆ ಶ್ರಮಿಸೋಣ ಎಂದು ಹೇಳಿದರು. ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ವಂ. ಪೀಟರ್ ಗೊನ್ಸಾಲ್ವಿಸ್, ಶಿರ್ತಾಡಿ ಚರ್ಚಿನ ಧರ್ಮಗುರುಗಳಾದ ವಂ. ಹೆರಾಲ್ಡ್  ಮಸ್ಕರೇನಸ್, ನಿರ್ಮಲ ಕಾನ್ವೆಂಟ್ ನ ಸುಪಿರಿಯರ್ ಆಗ್ನೆಸ್ ಅಂದ್ರಾದೆ ಉಪಸ್ಥಿತರಿದ್ದರು. ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷರಾದ ಐಸಕ್ ವಾಸ್ ಸ್ವಾಗತಿಸಿದರು. ಕಾರ್ಯದರ್ಶಿ ಆಲ್ವಿನ್ ಪಿಂಟೊ ವಂದಿಸಿದರು. ರೋಶನ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
ಜಾಹೀರಾತು
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 17 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 30 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಲೊರೆಟ್ಟೋ ಚರ್ಚ್ ನೂತನ ಧರ್ಮಗುರು ವಂ.ಫ್ರಾನ್ಸಿಸ್ ಕ್ರಾಸ್ತ ಅವರಿಗೆ ಸ್ವಾಗತ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*