ಬಂಟ್ವಾಳ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಪ್ರಥಮ ಕಾರ್ಯಕಾರಿಣಿ ಸಭೆ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಗುರುದತ್ತ ನಾಯಕ್ ಉದ್ಘಾಟಿಸಿದರು. ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಮಾತಾನಾಡಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನಮ್ಮ ಮುಂದಿದೆ ಎಂದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ ಮಾರ್ಗದರ್ಶನ ನೀಡಿದರು. ಜಿಲ್ಲಾ ಪ್ರಮುಖರಾದ ಸತೀಶ್ ಕುಂಪಲ,ಸಂದೇಶ್ ಶೆಟ್ಟಿ,ಸಹಜ್ ರೈ,ಸುದರ್ಶನ್ ಬಜ,ಸುಜಿತ್ ಕಂಬಳಪದವು,ಕ್ಷೇತ್ರ ಪ್ರ.ಕಾರ್ಯದರ್ಶಿ ಡೊಂಬಯ್ಯ ಅರಳ,ವಜ್ರನಾಥ ಕಲ್ಲಡ್ಕ,ದಿನೇಶ್ ಶೆಟ್ಟಿ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…