ಶ್ರೀರಾಮ ಮಂದಿರ ನಿರ್ಮಾಣ; ಧರ್ಮದ ಪುನರುತ್ಥಾನ, ಮನೆ ಮನಗಳಲ್ಲಿ ಶ್ರೀರಾಮಜ್ಯೋತಿ ಬೆಳಗಿಸೋಣ: ಒಡಿಯೂರು ಶ್ರೀಗಳು

ಜಾಹೀರಾತು

ಬಂಟ್ವಾಳ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿಬಂದಿರುವುದು ಸಂತಸದ ವಿಚಾರ ಎಂದು ಬಂಟ್ವಾಳ ತಾಲೂಕಿನ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ.

ಭಾರತೀಯ ಪರಂಪರೆಯಲ್ಲಿ ರಾಮಾಯಣಮಹಾಭಾರತ ಸಂಸ್ಕೃತಿಯ ಕಣ್ಣುಗಳಿದ್ದಂತೆ. ’ರಾಮಎನ್ನುವ ಎರಡಕ್ಷರವೇ ಅದ್ಭುತವಾದುದು. ಪರಿಶುದ್ಧವಾದ ಆಕಾಶ, ಅಗ್ನಿ, ವಾಯು ತತ್ತ್ವಗಳ ಚಿಂತನೆಯು ಅಡಗಿರುವುದಲ್ಲದೆ ಪಂಚಭೂತಾತ್ಮಗಳ ಸರ್ವಸ್ವವೂ ಇದರಲ್ಲಿದೆ. ಸುಲಲಿತವಾಗಿರಾಮಎನ್ನಲು ಅನುಕೂಲವಾದುದು. ಮಂತ್ರ ಮಂತ್ರ ಜಪಿಸಿ ನೀ ಕೆಡಬೇಡ, ರಾಮ ಮಂತ್ರವ ಜಪಿಸೋ…’ ಎಂದು ದಾಸರು ಕೊಂಡಾಡಿದ್ದಾರೆ. ಸಾಕ್ಷಾತ್ ಶಿವನೇ ತನ್ನ ಭಾಮೆ ಶಿವೆಗೆ ರಾಮ ಮಂತ್ರವನ್ನು ಬೋಧಿಸಿದನು. ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವೆಂದರೆ ಧರ್ಮದ ಪುನರುತ್ಥಾನಕ್ಕೆ ನಾಂದಿಯೇ ಸರಿ. ತತ್ಸಂಬಂಧ ತಾವೆಲ್ಲರೂ ಮನೆಮನಗಳಲ್ಲಿ ಶ್ರೀರಾಮಜ್ಯೋತಿಯನ್ನು ಬೆಳಗಿಸೋಣ. ಸತ್ಸಂಕಲ್ಪವನ್ನು ಮಾಡೋಣ. ಶೀಘ್ರವಾಗಿ ರಾಮ ಮಂದಿರ ನಿರ್ಮಾಣಗೊಂಡು ವಿಶ್ವಕ್ಕೆ ಮಾದರಿಯಾಗಲಿ. ಪ್ರಧಾನಮಂತ್ರಿಗಳಾದ ಮೋದಿಜಿಯವರ ಮೂಲಕ ಸುಮುಹೂರ್ತದಲ್ಲಿ ಶಿಲಾನ್ಯಾಸ ನಡೆಯುವುದು ಅರ್ಥಪೂರ್ಣವಾಗಿದೆ. ರಾಮಪ್ರೇಮವೆಂದರೆ ಅದು ರಾಷ್ಟ್ರಪ್ರೇಮವೇ ಸರಿ. ರಾಮತತ್ತ್ವದಲ್ಲಿ ರಾಷ್ಟ್ರೀಯತೆಯನ್ನು ಬೆಳಗುವ ಶಕ್ತಿಯಿದೆ. ಅಧ್ಯಾತ್ಮದ ಅಂದವಿದೆ. ನಾವೆಲ್ಲರೂ ಮಂದಿರ ನಿರ್ಮಾಣಕ್ಕೆ ಕೈಲಾದ ಸೇವೆಯನ್ನು ಆತ್ಮಾರ್ಥವಾಗಿ ಸಲ್ಲಿಸೋಣ. ಆತ್ಮಜ್ಞಾನಕ್ಕೆ ಇನ್ನೊಂದು ಹೆಸರಾದ ಆಂಜನೇಯನ ಅನುಗ್ರಹ ಜೊತೆಗಿರುವಾಗ ಎಲ್ಲವೂ ನಿರ್ವಿಘ್ನವಾಗಿ, ಸಾಂಗವಾಗಿ ನಡೆಯಲೆಂದು ಹಾರೈಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶ್ರೀರಾಮ ಮಂದಿರ ನಿರ್ಮಾಣ; ಧರ್ಮದ ಪುನರುತ್ಥಾನ, ಮನೆ ಮನಗಳಲ್ಲಿ ಶ್ರೀರಾಮಜ್ಯೋತಿ ಬೆಳಗಿಸೋಣ: ಒಡಿಯೂರು ಶ್ರೀಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*