ಬಂಟ್ವಾಳ: ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಸಿಐಟಿಯು ನೋಂದಾಯಿತ ಕಟ್ಟಡ ಕಾರ್ಮಿಕರು ಬಿ.ಸಿ.ರೋಡಿನ ಕಾರ್ಮಿಕ ನಿರೀಕ್ಷಕರ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಸಮಗ್ರ ಕೋವಿಡ್ ಪರಿಹಾರಕ್ಕೆ ಆಗ್ರಹಿಸಿ ಹಾಗೂ ಕಲ್ಯಾಣ ಮಂಡಳಿಯು ಕೋವಿಡ್ ಪರಿಹಾರದ ಲೆಕ್ಕ ನೀಡಲು ಒತ್ತಾಯಿಸಿ, ಕಲ್ಯಾಣ ಮಂಡಳಿಗಳನ್ನು ವಿಲೀನಗೊಳಿಸುವ ಕೇಂದ್ರ ಸರಕಾರದ ನೀತಿ ಖಂಡಿಸಿ, ಕೋವಿಡ್ ಪರಿಹಾರಕ್ಕೆ ಅರ್ಜಿ ಹಾಕಲು ಬಾಕಿ ಇರುವ ಕಾರ್ಮಿಕರಿಗೆ ಅರ್ಜಿ ಹಾಕಲು ಅವಕಾಶ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು.
ಸಂಘಟನೆಯ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ, ಕಾರ್ಮಿಕ ಅಧಿಕಾರಿಗಳು ಸಮಸ್ಯೆಗಳನ್ನು ಪರಿಹರಿಸದ್ದಿದ್ದರೆ ಎಲ್ಲಾ ಕಟ್ಟಡ ಕಾರ್ಮಿಕರನ್ನು ಒಟ್ಟು ಸೇರಿಸಿ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು .ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರಕ್ಕೆ ಬಂಟ್ವಾಳ ಕಾರ್ಮಿಕ ನಿರೀಕ್ಷಕರ ಮುಖಾಂತರ ಮನವಿ ಸಲ್ಲಿಸಲಾಯಿತು. ವಕೀಲ ಮಹಮ್ಮದ್ ಗಝಾಲಿ ಸ್ವಾಗತಿಸಿದರು, ಪ್ರತಿಭಟನೆಯ ನೇತೃತ್ವವನ್ನು ಮುಖಂಡರಾದ ಉದಯಕುಮಾರ್ ಬಂಟ್ವಾಳ, ಸುರೇಂದ್ರ ಕೋಟ್ಯಾನ್, ಸಾಮಾಜಿಕ ಕಾರ್ಯಕರ್ತರಾದ ರಾಜಾ ಚೆಂಡ್ತಿಮಾರ್, ಮಹಮ್ಮದ್ ಹನೀಫ್, ದಿನೇಶ್ ಆಚಾರಿ ಮಾಣಿ, ಲಿಯಾಕತ್ ಖಾನ್ ವಹಿಸಿದ್ದರು.
Be the first to comment on "ವಿವಿಧ ಬೇಡಿಕಗಳ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ"