ಸಿಮೆಂಟ್ ಹುಡಿ ಹೇರಿಕೊಂಡು ಬರುತ್ತಿದ್ದ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಚರಂಡಿಗೆ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು-ಬೆಂಗಳೂರು ರಸ್ತೆಯ ನೀರಕಟ್ಟೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಸಿಮೆಂಟ್ ಹುಡಿ ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್, ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬರುತ್ತಿದ್ದಾಗ ಮಗುಚಿ ಬಿದ್ದಿದೆ. ಗಾಯಾಳು ಚಾಲಕ ಗಣೇಶ್ ನನ್ನು ನೆಲ್ಯಾಡಿ ಆಸ್ಪತ್ರೆಗೆ ಕರೆದೊಯ್ದು ನಂತರ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.