ಬಂಟ್ವಾಳ

ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲ, ಬಡವರ ಪರಿಸ್ಥಿತಿ ಶೋಚನೀಯ: ಸಮಾನ ಮನಸ್ಕ ಸಂಘಟನೆಗಳ ಆರೋಪ

ಜಾಹೀರಾತು

ಬಂಟ್ವಾಳ: ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಬಡವರ ಪರಿಸ್ಥಿತಿ ಶೋಚನೀಯವಾಗಿದೆ. ಜನರ ಸಂಕಷ್ಟಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಯಿತು.

ಅಧ್ಯಕ್ಷ ಬಿ.ಎಂ.ಪ್ರಭಾಕರ ದೈವಗುಡ್ಡೆ, ಪ್ರಧಾನ ಕಾರ್ಯದರ್ಶಿ ಬಿ.ಶೇಖರ್ ನೇತೃತ್ವದಲ್ಲಿ ಈ ಸಂಬಂಧ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮುಖಂಡರಾದ ರಾಮಣ್ಣ ವಿಟ್ಲ, ಸುರೇಶ್ ಕುಮಾರ್, ನ್ಯಾಯವಾದಿ ಚಂದ್ರಶೇಖರ ಪೂಜಾರಿ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ,  ಹಾರೂನ್ ರಶೀದ್,  ಲೋಕೇಶ್ ಸುವರ್ಣ, ಪ್ರಕಾಶ್ ಶೆಟ್ಟಿ ತುಂಬೆ ಶ್ರೀಶೈಲ, ಪುರಸಭಾ ಸದಸ್ಯ ಲೋಲಾಕ್ಷ ಶೆಟ್ಟಿ,  ಸುರೇಂದ್ರ ಕೋಟ್ಯಾನ್, ಬಾಬು ಭಂಡಾರಿ, ಲೋಕೇಶ ಪೂಜಾರಿ, ಇಸ್ಮಾಯಿಲ್ ಕೆಳಗಿನಪೇಟೆ, ಶರೀಫ್ ಮಧ್ವ, ಸರಸ್ವತಿ ಕಡೇಶಿವಾಲಯ, ಪ್ರೇಮನಾಥ ಕೆ, ಉದಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಲಾಕ್ ಡೌನ್ ನಿಂದಾಗಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ದುಡಿಯುವ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಪರಿಹಾರ ಧನಸಹಾಯ ಸಮರ್ಪಕವಾಗಿ ಬಿಡುಗಡೆ ಮಾಡಿಲ್ಲ. ದ.ಕ.ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಉಚಿತ ಚಿಕಿತ್ಸೆಯನ್ನು ಯಾವ ಕಾರ್ಡೂ ಇಲ್ಲದೆ ಆಧಾರ್ ಕಾರ್ಡ್ ಇದ್ದರೆ ಸಾಕು ಎಂದು ಸರ್ಕಾರದ ಉಸ್ತುವಾರಿ ಮಂತ್ರಿಗಳು ಹೇಳಿದ್ದರೂ ಖಾಸಗಿ ಆಸ್ಪತ್ರೆಗಳ ಶುಲ್ಕ ದುಬಾರಿಯಾಗುವ ಬಗ್ಗೆ ದೂರುಗಳಿವೆ. ಕೊರೊನಾ ಹೆಸರಲ್ಲಿ ಭಯ ಹುಟ್ಟಿಸುವುದನ್ನು ನಿಯಂತ್ರಿಸಿ, ಮೂಲಸೌಕರ್ಯ ಹೆಚ್ಚಿಸಿ, ಕ್ವಾರಂಟೈನ್ ಕೇಂದ್ರಗಳ ಸಹಿತ ಬಡವರಿಗೆ ಸರಿಯಾದ ಸೌಕರ್ಯಗಳನ್ನು ಒದಗಿಸಿ ಎಂದು ಮನವಿ ಮಾಡಲಾಯಿತು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts