ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಉದ್ಯೋಗ ನೈಪುಣ್ಯ ತರಬೇತಿಯ 2ನೇ ಹಂತದ ತರಬೇತಿ ಆರಂಭ

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ದ.ಕ.ಜಿಲ್ಲಾ  ಸಹಕಾರ ಭಾರತಿ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇವರ ಸಹಭಾಗಿತ್ವದಲ್ಲಿ ಬಂಟ್ವಾಳ ತಾಲೂಕಿನ ಉದ್ಯೋಗ ನೈಪುಣ್ಯ ತರಬೇತಿಯ 2ನೇ  ಹಂತದ 4 ವಿಷಯಗಳ ಉದ್ಘಾಟನಾ  ಸಮಾರಂಭ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾಭವನದಲ್ಲಿ ಸೋಮವಾರ ನಡೆಯಿತು.ಆಗಸ್ಟ್ 8 ಶನಿವಾರದವರೆಗೆ.ತರಬೇತಿ ನಡೆಯಲಿದ್ದು, ಮೊಬೈಲ್ ಫೋನ್ ಸರ್ವಿಸ್ಸಿಂಗ್, ಫುಡ್ ಟೆಕ್ನಾಲಜಿ, ಕಸಿ ಕಟ್ಟುವುದು ಮತ್ತು ಸಿಸಿಟಿವಿ ಅಳವಡಿಕೆ ಕುರಿತ ತರಬೇತಿಗಳು ನಡೆಯುತ್ತಿವೆ.

ಜಾಹೀರಾತು

ಶಿಬಿರವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ ಮಾನವ ಸಂಪನ್ಮೂಲವನ್ನು ಕೌಶಲ್ಯಭರಿತವಾಗಿ ರೂಪಿಸಿಕೊಂಡಾಗ ಸಮೃದ್ಧ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬಹುದು ಎಂದರು. ಮುಖ್ಯ ಅತಿಥಿ ಸಹಕಾರ ಭಾರತಿಯ ಕೊಂಕೋಡಿ ಪದ್ಮನಾಭ ಶುಭ ಹಾರೈಸಿದರು. ಮಂಗಳೂರು ಗ್ರಾಮವಿಕಾಸ ಸಮಿತಿ ಸಹ ಸಂಯೋಜಕರಾದ ವೆಂಕಟರಮಣ ಹೊಳ್ಳ ಸ್ವಾಗತಿಸಿದರು.  ಗೋಳ್ತಮಜಲು ಮಂಡಲ ಗ್ರಾಮವಿಕಾಸ ಪ್ರಮುಖ್ ಪುರುಷೋತ್ತಮ  ವಂದಿಸಿದರು. ಗೋಪಾಲ ಬಲ್ಯಾಯ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾಶ್ರೀ ಪ್ರಾರ್ಥನೆ ಮತ್ತು ಆಶಯಗೀತೆ ಹಾಡಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಉದ್ಯೋಗ ನೈಪುಣ್ಯ ತರಬೇತಿಯ 2ನೇ ಹಂತದ ತರಬೇತಿ ಆರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*