ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಚುರುಕಾಗಲಿದ್ದು, ಕರ್ನಾಟಕದ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೊರಡಿಸಿದ ಹವಾಮಾನ ಮುನ್ಸೂಚನೆ ಮತ್ತು ಎಚ್ಚರಿಕೆಯ ಸಂದೇಶದ ಪ್ರಕಾರ, ಜಿಲ್ಲೆಯಲ್ಲಿ ಆಗಸ್ಟ್ 4ರಿಂದ 5ರವರೆಗೆ RED ALERT ಹಾಗೂ ಆಗಸ್ಟ್ 6ರಿಂದ 8ರವರೆಗೆ ORANGE ALERT ಇದ್ದು, ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆ ಇದೆ. ಸಾರ್ವಜನಿಕರು ಎಚ್ಚರದಿಂದಿರಲು ಪ್ರಾಧಿಕಾರ ಸೂಚಿಸಿದ್ದು, ಸಮಸ್ಯೆಗಳಿಗೆ ಟೋಲ್ ಫ್ರೀ ಸಂಖ್ಯೆ 1077 ಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕರಾವಳಿಯಲ್ಲಿ ಮಳೆ ಆರ್ಭಟ, ರಾತ್ರಿ ಹೆಚ್ಚಾದ ಗಾಳಿಮಳೆ, RED ALERT ಘೋಷಣೆ"