Uncategorized

ಕಲ್ಲಡ್ಕ ಶ್ರೀರಾಮಮಂದಿರದಲ್ಲಿ ಶಂಖಾನಾದ, ಭಜನೆ, ಡಾ. ಭಟ್ ಅವರಿಗೆ ಸನ್ಮಾನ

ಜಾಹೀರಾತು

ಅಯೋಧ್ಯೆಯಲ್ಲಿ ಶ್ರೀರಾಮಮಂದಿರಕ್ಕೆ ಬುಧವಾರ ಬೆಳಗ್ಗೆ ಶಿಲಾನ್ಯಾಸ ನಡೆಯುವ ಹೊತ್ತಿನಲ್ಲಿ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಅದರ ನೇರ ಪ್ರಸಾರ ವೀಕ್ಷಣೆ ನಡೆಯಿತು. ಶಿಲಾನ್ಯಾಸ ಸಂದರ್ಭ ಶಂಖ, ಜಾಗಟೆ, ಚೆಂಡೆ ವಾದನ ಮೂಲಕ ವಿಜಯೋತ್ಸವದ ಸಂಭ್ರಮವನ್ನು ಆಚರಿಸಲಾಯಿತು.

ಬಳಿಕ ಭಜನಾ ಕಾರ್ಯಕ್ರಮ, ಮಹಾಮಂಗಲಾರತಿ ನಡೆಯಿತು. ಈ ವೇಳೆ ಅಯೋಧ್ಯೆ ಕರಸೇವೆ ಸಂದರ್ಭ ನೇತೃತ್ವ ವಹಿಸಿದ್ದ ಹಿರಿಯ ಆರೆಸ್ಸೆಸ್ ನಾಯಕ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಧ್ಯಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಸನ್ಮಾನಿಸಲಾಯಿತು. ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಪೂಜೆ ನೆರವೇರಿಸಿದರು. ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ, ರಾಷ್ಟ್ರಸೇವಿಕಾ ಪ್ರಾಂತ ಪ್ರಮುಖ್ ಕಮಲಾ ಪ್ರಭಾಕರ ಭಟ್, ಶ್ರೀರಾಮ ಮಂದಿರ ಆಡಳಿತ ಸಮಿತಿ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ವಿಹಿಂಪ ವಿಟ್ಲ ಪ್ರಖಂಡ ಅಧ್ಯಕ್ಷ ಕ.ಕೃಷ್ಣಪ್ಪ, ಶ್ರೀರಾಮ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಸುಜಿತ್ ಕೊಟ್ಟಾರಿ, ಮಂದಿರದ ಭಜನಾ ಸಮಿತಿ ಅಧ್ಯಕ್ಷರಾದ ಹರೀಶ್ ಆಚಾರಿ, ಬಜರಂಗದಳವಿಟ್ಲ ಪ್ರಖಂಡ ಅಧ್ಯಕ್ಷರಾದ ಮಿಥುನ್ ಪೂಜಾರಿ, ಸಹಿತ ಸಂಘ ಪರಿವಾರದ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts