ಬಂಟ್ವಾಳ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ವಿಶೇಷ ಪ್ರಾರ್ಥನೆಯನ್ನು ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿಯವರ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ತಾ.ಪಂ ಸದಸ್ಯ ಯಶವಂತ ಪೊಳಲಿ, ತಾಪಂ ಮಾಜಿ ಸದಸ್ಯ ವೆಂಕಟೇಶ್ ನಾವಡ, ಪ್ರಮುಖರಾದ ಸುದರ್ಶನ್ ಬಜ, ಪ್ರದೀಪ್ ಅಜ್ಜಿಬೆಟ್ಟು,ಅಶ್ವಥ್, ಕಾರ್ತಿಕ್ ಬಳ್ಳಾಲ್, ಕಿಶೋರ್ ಪಲ್ಲಿಪ್ಪಾಡಿ.ಲೋಕೇಶ್ ಭರಣಿ, ನಂದರಾಮ್ ರೈ,,ಸುಕೇಶ್ ಚೌಟ, ವಾಮನ ಆಚಾರ್ಯ ಉಪಸ್ಥಿತರಿದ್ದರು.
Be the first to comment on "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಂದ ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ"