ಜಿಲ್ಲಾ ಸುದ್ದಿ

ಕೋವಿಡ್ ನಿರ್ವಹಣೆ: ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ

ಜಾಹೀರಾತು

ಕೋವಿಡ್ ನಿರ್ವಹಣೆ ಸಂಬಂಧ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಜೊತೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮನವಿ ಮೇರೆಗೆ ಮಂಗಳೂರಿನ ಎರಡು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ, ಜಿ.ಪಂ.ಸಿಇಒ ಡಾ. ಸೆಲ್ವಮಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ, ವೆನ್ ಲಾಕ್ ಅಧೀಕ್ಷಕ ಡಾ. ಸದಾಶಿವ ಮೊದಲಾದವರು ಇದ್ದರು.

ಈ ವೇಳೆ ಮಾತನಾಡಿದ ಸಚಿವ ಕೋಟ ಹೇಳಿದ್ದು ಹೀಗೆ

ಜಾಹೀರಾತು

ಕೋಟ ಶ್ರೀನಿವಾಸ ಪೂಜಾರಿ

  • ಕೋವಿಡ್ ನಿರ್ವಹಣೆಗೆ ಖಾಸಗೀ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ  ಸಾಮಥ್ಯ೯ದ ಶೇಕಡಾ 50 ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು
  • ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋರೋನಾ ಸೋಂಕಿತರ ಚಿಕಿತ್ಸೆಗೆ ಖಾಸಗೀ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು.
  • ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು
  • ಖಾಸಗೀ ಆಸ್ಪತ್ರೆಗಳಿಗೆ ಸರಕಾರದಿಂದ ರ್ಯಾಪಿಡ್ ಕಿಟ್ ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ
  • ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್ ಗಳನ್ನು ಸರಬರಾಜು ಮಾಡಲಿದೆ

ಶುಲ್ಕ ಮಾಹಿತಿಯ ದೊಡ್ಡ ಬೋರ್ಡ್ ಕಡ್ಡಾಯ: ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಹೇಳಿದ್ದು ಹೀಗೆ

ಡಾ. ಕೆ.ವಿ.ರಾಜೇಂದ್ರ

  • ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಆಯುಷ್ಮಾ‌ನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋಡ್೯ ಹಾಕಿ ವಿವರ ನಮೂದಿಸಬೇಕು
  • ಎಲ್ಲಾ ಮೆಡಿಕಲ್ ಕಾಲೇಜುಗಳು ಪ್ರತೀ ದಿ‌ನ 100 ಮಂದಿಯ ರ್ಯಾಪಿಡ್ ಆಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಸಾರ್ವಜನಿಕರಿಗೆ ಆಯುಷ್ಮಾ‌ನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ‌ ಜರುಗಿಸಲಾಗುತ್ತದೆ

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ