ವಿಟ್ಲ

ಕನ್ಯಾನ ತಾಪಂ ಸದಸ್ಯ ಕುಮಾರ ಭಟ್ ಬದಿಕೋಡಿ ಅವರಿಗೆ ಕೊರೊನಾ ಸೋಂಕು, ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗುವಂತೆ ಮನವಿ

ಬಂಟ್ವಾಳ ತಾಲೂಕು ಪಂಚಾಯಿತಿಯ ಕನ್ಯಾನ ಕ್ಷೇತ್ರವನ್ನು ಪ್ರತಿನಿಧಿಸುವ ಸದಸ್ಯ ಕುಮಾರ ಭಟ್ ಬದಿಕೋಡಿ ಅವರಿಗೆ ಕೋವಿಡ್ ಸೋಂಕು ತಗಲಿದೆ. ಬುಧವಾರ ಈ ಕುರಿತು ವರದಿ ಬಂದಿದ್ದು, ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಗ್ರಾಮದಲ್ಲಿ ಜನಪ್ರತಿನಿಧಿಗಳು ಯಾರೂ ಇಲ್ಲದ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯನ ನೆಲೆಯಲ್ಲಿ ಗ್ರಾಮಸ್ಥರಿಗೆ ಸ್ಪಂದಿಸಬೇಕಾದ ಸಂದರ್ಭಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಮಾಡಿಸಿದ ಕೋವಿಡ್ 19 ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ಹೀಗಾಗಿ ಕಳೆದ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್ ನಲ್ಲಿದ್ದು ಮುಂಜಾಗರೂಕತೆ ವಹಿಸಿ ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಜಾಹೀರಾತು

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts