ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರವೂ ಭಾರಿ ಮಳೆಯಾಗುವ ಸಂಭವ ಇರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್ 11ರವರೆಗೆ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಆ ದಿನಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಸಾರ್ವಜನಿಕರು, ನದಿ, ಸಮುದ್ರಕ್ಕೆ ಇಳಿಯಬಾರದು. ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ನಿಲ್ಲಬೇಕು. ಎಲ್ಲಾ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇರುವಂತೆ ಸೂಚಿಸಿದೆ. ಜಿಲ್ಲೆಯ ಜನರಿಗಾಗಿ ತುರ್ತು ಸೇವೆಯ ಕಂಟ್ರೋಲ್ ರೂಂ ಕೂಡ ತೆರೆದಿದ್ದು, ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ 1077ಗೆ ಇಲ್ಲವೇ 9483908000 ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಮಾಹಿತಿ ಪಡೆಯಬಹುದಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಭಾರಿ ಮಳೆ ಸಂಭವ: ರೆಡ್ ಅಲರ್ಟ್ ಘೋಷಣೆ"
Be the first to comment on "ಭಾರಿ ಮಳೆ ಸಂಭವ: ರೆಡ್ ಅಲರ್ಟ್ ಘೋಷಣೆ"