ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ, ಕುರಿಯ ಗ್ರಾಮದ ಅಮ್ಮುಂಜೆ ನಿವಾಸಿ ನಾರಾಯಣ ನಾಯ್ಕ (48) ಹೃದಯಾಘಾತಕ್ಕೀಡಾಗಿ ಆ.8ರಂದು ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮನೆಯಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ರಾತ್ರಿ ವೇಳೆ ಕೊನೆಯುಸಿರೆಳೆದಿದ್ದಾರೆ. ಕಳೆದ ಹಲವು ವರ್ಷಗಳಿಂದ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡಿಕೊಂಡು ಚಿರಪರಿಚಿತರಾಗಿದ್ದ ನಾರಾಯಣ ಅವರು ಸರಳ, ಸಜ್ಜನಿಕೆಯೊಂದಿಗೆ ಎಲ್ಲರ ಜೊತ ಸ್ನೇಹಜೀವಿಯಾಗಿ ಗುರುತಿಸಿಕೊಂಡಿದ್ದರು. ಮರಾಠಿ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳಲ್ಲಿಯೂ ಅವರು ಗುರುತಿಸಿಕೊಂಡಿದ್ದರು. ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಪ್ರಚಾರ ಸಮಿತಿಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು. ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಕಾರ್ಯದರ್ಶಿ ಆಗಿದ್ದರು. ಪತ್ನಿ , ಪುತ್ರನನ್ನು ಅವರು ಹೊಂದಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…