ಕಾಲ್ಬೆರಳಲ್ಲಿ ಪರೀಕ್ಷೆ ಬರೆದ ಬಂಟ್ವಾಳದ ಕೌಶಿಕ್ ಫಸ್ಟ್ ಕ್ಲಾಸ್ ಮಾರ್ಕ್

ಜಾಹೀರಾತು

ಜಾಹೀರಾತು

ಶಿಕ್ಷಣ ಸಚಿವರಿಂದಲೇ ಅಭಿನಂದನೆ ಮತ್ತು ವಿಶೇಷ ಮೆಚ್ಚುಗೆ ಗಳಿಸಿದ್ದ ಬಂಟ್ವಾಳ ತಾಲೂಕಿನ ಎಸ್.ವಿ.ಎಸ್.ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿ ಯಾರ ಸಹಾಯವೂ ಪಡೆಯದೆ ಕಾಲಿನ ಬೆರಳುಗಳಿಂದಲೇ ಉತ್ತರ ಬರೆದ ಬಂಟ್ವಾಳದ ಹತ್ತನೇ ತರಗತಿ ವಿದ್ಯಾರ್ಥಿ  ಕೌಶಿಕ್  ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ 424 ಅಂಕ ಗಳಿಸುವ ಮೂಲಕ ಶೇ.68 ಅಂಕ ಗಳಿಸಿದ್ದಾನೆ. ಈತನಿಗೆ ಹೆತ್ತವರಾದ ರಾಜೇಶ್ ಆಚಾರ್ಯ ಮತ್ತು ಜಲಜಾಕ್ಷಿ ದಂಪತಿ ಸಿಹಿ ತಿನಿಸಿ ಸಂಭ್ರಮಿಸಿದರು. ಕನ್ನಡದಲ್ಲಿ 96, ಆಂಗ್ಲ ಭಾಷೆಯಲ್ಲಿ 50, ಸಂಸ್ಕೃತದಲ್ಲಿ 83, ಗಣಿತದಲ್ಲಿ 63, ವಿಜ್ಞಾನದಲ್ಲಿ 54, ಸಮಾಜದಲ್ಲಿ 78 ಅಂಕ ಗಳಿಸಿದ್ದು, ಒಟ್ಟು 424 ಅಂಕಗಳು ಕೌಶಿಕ್ ಗೆ ಬಂದಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಕೌಶಿಕ್, ಪಿಯುಸಿ ವಾಣಿಜ್ಯ ವಿದ್ಯಾಭ್ಯಾಸ ನಡೆಸುವ ಇಚ್ಛೆ ಇದ್ದು, ಇದಕ್ಕೆ ಶಾಸಕ ರಾಜೇಶ್ ನಾಯ್ಕ್ ಅವರು ನೆರವು ನೀಡುವುದಾಗಿ ತಿಳಿಸಿದ್ದಾರೆ ಎಂದರು.

ಕೌಶಿಕ್ ತನ್ನ ಅಣ್ಣ ಕಾರ್ತಿಕ್. ತಮ್ಮ ಮೋಕ್ಷಿತ್ ಜೊತೆ ಬಂಟ್ವಾಳ ಕಂಚಿಕಾರಪೇಟೆಯ ಪುಟ್ಟ ಮನೆಯಲ್ಲಿ ವಾಸವಿದ್ದಾನೆ. ಬಡತನವಿದ್ದರೂ ಹುಟ್ಟುವಾಗಲೇ ತನ್ನೆರಡೂ ಕೈಗಳಲ್ಲಿ ವೈಕಲ್ಯಗಳಿದ್ದರೂ ಕೌಶಿಕ್ ಯಾರ ಸಹಾಯವೂ ಇಲ್ಲದೆ ಕಾಲ್ಬೆರಳಲ್ಲೇ ಬರೆಯಲು ಕಲಿತಿದ್ದಾನೆ. ಅಂಗವೈಕಲ್ಯವಿದೆ ಎಂಬ ಚಿಂತೆಯಿಂದ ಕೊರಗದೆ ಮನೆಯವರೂ ಬಾಲಕನ ಚಟುವಟಿಕೆಗಳಿಗೆ ತುಂಬು ಮನಸ್ಸಿನಿಂದ ಪ್ರೋತ್ಸಾಹ ನೀಡುತ್ತಿದ್ದಾರೆ. ಕಾಲಿನ ಸಹಾಯದಲ್ಲೇ ಮಣ್ಣಿನ ಕಲಾಕೃತಿ ರಚಿಸುವುದು, ಡ್ಯಾನ್ಸ್ ಮಾಡುವುದು, ಸೈಕಲ್ ನಲ್ಲಿ ಸವಾರಿ, ಈಜು ಈತನ ಆಸಕ್ತಿಯ ವಿಷಯಗಳು. ಸಣ್ಣ ಸಣ್ಣ ವಿಷಯಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಮಕ್ಕಳಿರುವ ಈ ದಿನಗಳಲ್ಲಿ ಕೌಶಿಕ್ ತನ್ನೆಲ್ಲ ಚಟುವಟಿಕೆಗಳ ಮೂಲಕ ಮನೆಯಲ್ಲಿ ಬಡತನವಿದ್ದರೂ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದಲೆ ಬರೆದು ಉತ್ತಮ ಅಂಕಗಳನ್ನೂ ಗಳಿಸಿ ಸ್ಫೂರ್ತಿಯಾಗಿದ್ದಾನೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಕಾಲ್ಬೆರಳಲ್ಲಿ ಪರೀಕ್ಷೆ ಬರೆದ ಬಂಟ್ವಾಳದ ಕೌಶಿಕ್ ಫಸ್ಟ್ ಕ್ಲಾಸ್ ಮಾರ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*