ಬೇರೆಯವರೊಂದಿಗೆ ಹೋಲಿಕೆ ಮಾಡಿ ನೋವಾಗುವಂತೆ ಮಾಡಬೇಡಿ. ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ನೀಡಿರುವ ಅವರು, ಇಂದು ಮಧ್ಯಾಹ್ನ 3.30ರ ಹೊತ್ತಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುತ್ತದೆ .ತಮ್ಮ ಮೊಬೈಲಿಗೆ ಫಲಿತಾಂಶ ಬರುತ್ತದೆ. ಕೊರೊನಾ ವಾತಾವರಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದೇ ದೊಡ್ಡ ಸಾಧನೆ ಎಂದು ತಮಗೆ ತಿಳಿದಿರಲಿ. ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ. ಗಳಿಸಿದ ಅಂಕಗಳಿಗೆ ತೃಪ್ತಿ ಪಡುವಂತೆ ಮನವೊಲಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿ .ಅವರನ್ನು ಬೇರೆಯವರೊಂದಿಗೆ ಹೋಲಿಸದಿರು. ಅವರು ಯಾವ ಕೋರ್ಸನ್ನು ಆಯ್ಕೆ ಮಾಡಿದ್ದರೂ ಆ ಕೋರ್ಸಿಗೆ ಸೇರಿಸಿ ಮುಂದೆ ಚೆನ್ನಾಗಿ ಓದಲು ಹೇಳಿ ಹಾಗೂ ಒಂದು ವೇಳೆ ಅವರ ನಿರೀಕ್ಷೆಗಿಂತ ಯಾವುದಾದರೂ ವಿಷಯದಲ್ಲಿ ಕಡಿಮೆ ಅಂಕ ಬಂದಲ್ಲಿ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅವಕಾಶವಿರುತ್ತದೆ .ಮಗು ಮನೆಯ ಬೆಳಕು ಆ ಬೆಳಕು ಸದಾ ಪ್ರಜ್ವಲಿಸಲಿ ಎಂಬುದೇ ನಮ್ಮೆಲ್ಲರ ಆಶಯ ಎಂದವರು ಸಂದೇಶ ನೀಡಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…