ಜಿಲ್ಲಾ ಸುದ್ದಿ

ಬಂಟ್ವಾಳದಲ್ಲಿ ಧಾರಾಕಾರ ಮಳೆ

ಶನಿವಾರ 9.3ರ ಮಟ್ಟದಲ್ಲಿ (ಅಪಾಯದ ಮಟ್ಟ 8.5) ಅಪಾಯದ ಮಟ್ಟ ಮೀರಿ ಹರಿದು ಆತಂಕ ಮೂಡಿಸಿದ್ದ ನೇತ್ರಾವತಿ ನದಿಯ ಹರಿವು ಭಾನುವಾರದಂತೆ ಸೋಮವಾರ ಬೆಳಗ್ಗೆಯೂ ಇಳಿಮುಖವಾಗಿದೆ.

ಜಾಹೀರಾತು

ಸೋಮವಾರ ಬೆಳಗ್ಗೆ 6.2 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದ ನೇತ್ರಾವತಿ ಕೆಲ ಹೊತ್ತಿನಲ್ಲಿ 6.1 ಮೀಟರ್ ಗೆ ತಗ್ಗಿತ್ತು. ಘಟ್ಟ ಪ್ರದೇಶದಲ್ಲಿ ಸುರಿಯುವ ಮಳೆ ಹಾಗೂ ನೀರಿನ ಹರಿವು ಹೊಂದಿಕೊಂಡು ನೇತ್ರಾವತಿ ನದಿಯ ಹರಿವು ಬಂಟ್ವಾಳದಲ್ಲಿ ಏರಿಳಿತವಾಗುತ್ತದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಭಾನುವಾರದಂತೆ ಸೋಮವಾರವೂ ಗುಡುಗು ಮಿಂಚಿನ ಸಹಿತ ಧಾರಾಕಾರವಾಗಿ ಮಳೆಯಾಗುತ್ತಿದೆ. ಬಿ.ಸಿ.ರೋಡ್, ಬಂಟ್ವಾಳ ಸಹಿತ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ನದಿ, ಹಳ್ಳ, ಕೆರೆ, ನೀರು ನಿಂತಿರುವ  ಪ್ರದೇಶಗಳಿಗೆ ಸಾರ್ವಜನಿಕರು, ಮಕ್ಕಳು, ವೃದ್ಧರು ತೆರಳಬಾರದಾಗಿ ಆಡಳಿತ ವಿನಂತಿಸಿದೆ.ಬಂಟ್ವಾಳ ತಾಲೂಕಿನಲ್ಲಿ ಕಳೆದ ಒಂದು ದಿನದಲ್ಲಿ 113.2 ಮಿ.ಮೀ ಮಳೆಯಾಗಿದ್ದು, ಸೋಮವಾರವೂ ಧಾರಾಕಾರ ಮಳೆಯಾಗುವ ಸಂಭವವಿದೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ