ಬಂಟ್ವಾಳ

ಬಂಟ್ವಾಳ ಪುರಸಭಾ ಕುಡಿಯುವ ನೀರು ರೇಚಕ ಸ್ಥಾವರಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ, ಪರಿಶೀಲನೆ

ಜಾಹೀರಾತು

ಜಾಹೀರಾತು

ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಜಕ್ರಿಬೆಟ್ಟುವಿನಲ್ಲಿರುವ ಬಂಟ್ವಾಳ ಪುರಸಭಾ ವ್ಯಾಪ್ತಿಗೊಳಪಟ್ಟ ಸಮಗ್ರ ಕುಡಿಯುವ ನೀರು ಸರಬರಾಜು  ಯೋಜನೆಯ ರೇಚಕ ಸ್ಥಾವರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಇತ್ಯರ್ಥ ಪಡಿಸುವ ಬಗ್ಗೆ ನಿರ್ಧರಿಸಲಾಗಿದೆ.

ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆ ಸೆಪ್ಟಂಬರ್ 2017ರ ಅವಧಿಯಲ್ಲಿ ಪೂರ್ಣಗೊಂಡು 1 ವರ್ಷದ ನಿರ್ವಹಣೆಯ ಬಳಿಕ ಬಂಟ್ವಾಳ ಪುರಸಭೆಗೆ ಹಸ್ತಾಂತರಿಸಬೇಕಾಗಿದ್ದು ಈವರೆಗೆ ಹಸ್ತಾಂತರವಾಗಿರುವುದಿಲ್ಲ. ಶಾಸಕರು ಭೇಟಿ ನೀಡಿ ಪರಿಶೀಲಿಸಿದ ಸಂದರ್ಭ ಹಲವಾರು ಸಮಸ್ಯೆಗಳು ಕಂಡು ಬಂದಿದ್ದು, ನಿರ್ವಹಣೆಗಳ ಬಗ್ಗೆ ಬಂಟ್ವಾಳ ಪುರಸಭೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಂಗಳೂರು ಮಧ್ಯೆ  ನಿರ್ವಹಣಾ ವೆಚ್ಚಕ್ಕೆ ಸಂಬಂಧಿಸಿದಂತೆ ಗೊಂದಲಗಳಿದ್ದು ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಸ್ಥಳದಿಂದಲೇ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಜೊತೆ ಮಾತುಕತೆ ನಡೆಸಲಾಯಿತು. ಈ ಸಂಧರ್ಭ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯನಿರ್ವಾಹಣಾ ಅಧಿಕಾರಿ ಚಂದ್ರಶೇಖರ, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಸಹಾಯಕ ಅಭಿಯಂತರರಾದ ಶೋಭಾಲಕ್ಷ್ಮಿ, ಪುರಸಭೆಯ ಅಭಿಯಂತರರಾದ ಡೊಮಿನಿಕ್ ಡಿಮೆಲ್ಲೊ, ಶಾಸಕರ ಆಪ್ತಸಹಾಯಕ ದಿನೇಶ್ ಹಾಗೂ ರೇಚಕ ಸ್ಥಾವರದ ಸಿಬ್ಬಂದಿ ಉಪಸ್ಥಿತರಿದ್ದರು

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ