ಬಂಟ್ವಾಳ: ಜಗತ್ತಿಗೇ ಅತ್ಯಮೂಲ್ಯವಾದ ಭಗವದ್ಗೀತೆಯನ್ನು ಬೋಧಿಸಿದ ಶ್ರೀ ಕೃಷ್ಣ ಜಗದ್ಗುರುವಾಗಿದ್ದಾನೆ. ಭಾರತೀಯರಾದ ನಾವೆಲ್ಲರೂ ಗೀತೆಯ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ ಹೇಳಿದರು.
ಮಂಗಳವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ಶ್ರೀ ಕೃಷ್ಣಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಶಿರಸ್ತೇದಾರ್ ರಾಜೇಶ್ ನಾಯ್ಕ್ ಮಾತನಾಡಿ, ಶ್ರೀ ಕೃಷ್ಣ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಇಷ್ಟಪಡುವಂತಹ ವ್ಯಕ್ತಿತ್ವವನ್ನು ಹೊಂದಿರುವವನು. ಧರ್ಮಕ್ಕೆ ಜಯ ದೊರಕುತ್ತಿದೆ ಎಂದು ತೋರಿಸಿದ ಇವನ ಜೀವನ ಎಲ್ಲರಿಗೂ ಆದರ್ಶವಾಗಬೇಕು ಎಂದರು. ಈ ಸಂದರ್ಭ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿದರು. ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.