ಬಂಟ್ವಾಳ

ಬಂಟ್ವಾಳ ತಾಲೂಕು ಮಟ್ಟದ ಶ್ರೀ ಕೃಷ್ಣ ಜಯಂತಿ ಆಚರಣೆ

ಜಾಹೀರಾತು

ಜಾಹೀರಾತು

ಬಂಟ್ವಾಳ: ಜಗತ್ತಿಗೇ ಅತ್ಯಮೂಲ್ಯವಾದ ಭಗವದ್ಗೀತೆಯನ್ನು ಬೋಧಿಸಿದ ಶ್ರೀ ಕೃಷ್ಣ ಜಗದ್ಗುರುವಾಗಿದ್ದಾನೆ. ಭಾರತೀಯರಾದ ನಾವೆಲ್ಲರೂ ಗೀತೆಯ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ ಹೇಳಿದರು.

ಮಂಗಳವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ಶ್ರೀ ಕೃಷ್ಣಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.  ಶಿರಸ್ತೇದಾರ್ ರಾಜೇಶ್ ನಾಯ್ಕ್ ಮಾತನಾಡಿ, ಶ್ರೀ ಕೃಷ್ಣ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಇಷ್ಟಪಡುವಂತಹ ವ್ಯಕ್ತಿತ್ವವನ್ನು ಹೊಂದಿರುವವನು. ಧರ್ಮಕ್ಕೆ ಜಯ ದೊರಕುತ್ತಿದೆ ಎಂದು ತೋರಿಸಿದ ಇವನ ಜೀವನ ಎಲ್ಲರಿಗೂ ಆದರ್ಶವಾಗಬೇಕು ಎಂದರು. ಈ ಸಂದರ್ಭ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್‌ ಬೆಂಜನಪದವು ಸ್ವಾಗತಿಸಿದರು. ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ