ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಂಟ್ವಾಳ ತಾಪಂನ ಕನ್ಯಾನ ಕ್ಷೇತ್ರದ ಕುಮಾರ ಭಟ್ ಬದಿಕೋಡಿ ಚೇತರಿಸಿಕೊಂಡಿದ್ದು, ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಕಳೆದ ಬುಧವಾರ ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗ್ರಾಮದಲ್ಲಿ ಜನಪ್ರತಿನಿಧಿಗಳು ಯಾರೂ ಇಲ್ಲದ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯನ ನೆಲೆಯಲ್ಲಿ ಗ್ರಾಮಸ್ಥರಿಗೆ ಸ್ಪಂದಿಸಬೇಕಾದ ಸಂದರ್ಭಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಮಾಡಿಸಿದ ಕೋವಿಡ್ 19 ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿತ್ತು.ಈಗ ಚೇತರಿಸಿಕೊಂಡಿದ್ದು, ಗುಣಮುಖನಾಗಿದ್ದೇನೆ ಎಂದವರು ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…