ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಅವರನ್ನು ಮಾಜಿ ಸಚಿವ ಬಿ ರಮಾನಾಥ ರೈ ಭೇಟಿಯಾಗಿ ಜಿಲ್ಲೆಯ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ಎಸ್ ಮೊಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಬೂಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಗ್ರಾಮ ಪಂಚಾಯತ್ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್ ಉಪಸ್ಥಿತರಿದ್ದರು.