ಕವರ್ ಸ್ಟೋರಿ

ಚಾವಡಿ, ಅಡುಗೆಕೋಣೆ, ಏನುಂಟು ಏನಿಲ್ಲ…..ಈ ಹೈಟೆಕ್ ಅಂಗನವಾಡಿಗಳ ಹೆಸರು ಅಜ್ಜಿಮನೆ

ಜಾಹೀರಾತು

ಜಾಹೀರಾತು

ಜಾಹೀರಾತು

ಚಿಕ್ಕಮಕ್ಕಳಿಗೆ ಮೂಲಭೂತ ವಿದ್ಯೆಯನ್ನು ಕಲಿಸುವ ಕೇಂದ್ರವಾಗಿದ್ದು ಇಲ್ಲಿ ಸವತೋಮುಖ ಅಭಿವೃದ್ಧಿಗೆ ಬೇಕಾದಂತ ಮೂಲಸೌಕರ್ಯಗಳನ್ನು ಒದಗಿಸಿ ಮಕ್ಕಳಿಗೆ ಬೆಳೆಯಲು ಸದವಕಾಶವನ್ನು ಕಲ್ಪಿಸಿ ಕೊಡುವ ಒಂದು ಸಮಸ್ತಿಯಲ್ಲಿ ಯೋಚಿಸಿ ಮಾದರಿ ಅಂಗನವಾಡಿ ಕಟ್ಟಡ ನಿರ್ಮಿಸುವ ಸಲುವಾಗಿ ಅಂದಿನ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಾಗಿದ್ದ ಡಾ.ಎಂ.ಆರ್. ರವಿ ಅವರು ನಿರ್ಮಿತಿ ಕೇಂದ್ರಕ್ಕೆ ಈ ಬಗ್ಗೆ ಒಂದು ಯೋಜನಾ ವರದಿಯನ್ನು ಸಲ್ಲಿಸಲು ಸೂಚಿಸಿದ್ದರು.

ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ಅವರು ತನ್ನ ತಂಡದೊಂದಿಗೆ ಈಗಾಗಲೇ ಜಿಲ್ಲೆಯಲ್ಲಿ ಸುಮಾರು 22 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಿದ್ದು ಇದರ ಅನುಭವದಿಂದ ಮಾದರಿ ಅಂಗನವಾಡಿ ಕಟ್ಟಡಕ್ಕೆ ಅಜ್ಜಿಮನೆ ಎಂಬ ಯೋಜನಾ ವರದಿಯನ್ನು ತಯಾರಿಸಲಾಯಿತು. ಈ ಯೋಜನೆಗೆ ಸಿಎಸ್‍ಆರ್ ಅಡಿ ಅನುದಾನ ನೀಡಲು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಎಂಆರ್‍ಪಿಎಲ್‍ಗೆ ಕೋರಿಕೆ ಸಲ್ಲಿಸಿದರು. ಇದನ್ನು ಪರಿಗಣಿಸಿ ಮಂಗಳೂರು ತಾಲೂಕಿನಲ್ಲಿ ಮೂರು ಅಂಗನವಾಡಿಗಳನ್ನು ನಿರ್ಮಿಸಲು ಎಂಆರ್‍ಪಿಎಲ್ ಸಂಸ್ಥೆಯು ಅನುಮೋದನೆ ನೀಡಿತು.

ಅದರಂತೆ ಮಂಗಳೂರು ದಕ್ಷಿಣ ಕ್ಷೇತ್ರದ ಬೆಂಗರೆ, ಮಂಗಳೂರು ಉತ್ತರ ಕ್ಷೇತ್ರದ ಕಾಟಿಪಳ್ಳ ಹಾಗೂ  ಮೂಡಬಿದ್ರೆ ಕ್ಷೇತ್ರದ ಮೂಡುಶೆಡ್ಡೆ ಎದುರುಪದವಿನಲ್ಲಿ ಅಜ್ಜಿಮನೆ ಅಂಗನವಾಡಿ ನಿರ್ಮಿಸಲು ಕಾಮಗಾರಿ ಪ್ರಾರಂಭಿಸಲಾಯಿತು.

ಜಾಹೀರಾತು

ಈ ಅಂಗನವಾಡಿ ಕಟ್ಟಡಗಳ ನಿರ್ಮಾಣ, ವಿನ್ಯಾಸವನ್ನು ಬಹಳ ನಾಜೂಕಿನಿಂದ ಆಕರ್ಷಕ ರೀತಿಯಲ್ಲಿ ಮಾಡಲಾಗಿದೆ.  ಯಾವುದೇ ಹೈಟೆಕ್ ಕಿಂಡರ್ ಗಾರ್ಡನ್ ನರ್ಸರಿಗಳನ್ನು ಮೀರಿಸುವಂತೆ ಹೊರಾಂಗಣ ಮತ್ತು ಒಳಾಂಗಣ ವಿನ್ಯಾಸ ಮಾಡಲಾಗಿದೆ. ಕಟ್ಟಡದಲ್ಲಿ ಮಕ್ಕಳಿಗೆ ಅಜ್ಜಿ ಮನೆಗೆ ಹೋದ ಭಾವನೆ ಬರುವಂತೆ ಅಲ್ಲಿ ಆಟವಾಡಲು ಅಂಗಳ, ಮಲಗಲು ಕೋಣೆ, ಅಡಿಗೆ ಮನೆ, ಚಾವಡಿ, ಶೌಚಾಲಯ ನಿರ್ಮಸಲಾಗಿದೆ.
ಅಜ್ಜಿಮನೆ ಅಂಗನವಾಡಿಯ ಹೊರ ಆವರಣದಲ್ಲಿ  ಪುಷ್ಪ ಉದ್ಯಾನವನ, ಎರೆಹುಳ ಗೊಬ್ಬರ ಘಟಕ, ಮಳೆ ನೀರು ಕೊಯ್ಲು ವ್ಯವಸ್ಥೆ ಅಲ್ಲದೆ ಸೋಲಾರ್ ದೀಪದೊಂದಿಗೆ ಸುಸಜ್ಜಿತ ಕಟ್ಟಡವನ್ನು 3 ಕಡೆಗಳಲ್ಲಿ ನಿರ್ಮಿಸಲಾಗಿದೆ. ಇಡೀ ಕಾಮಗಾರಿಯ ಸಂಪೂರ್ಣ ವೆಚ್ಚ ಸುಮಾರು ರೂ. 25 ಲಕ್ಷ ಮೊತ್ತದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ.
ಮಕ್ಕಳಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸಲು ಕನ್ನಡ ಮತ್ತು ಇಂಗ್ಲೀಷ್‍ನಲ್ಲಿ ಗೋಡೆ ಬರಹ ಮತ್ತು ಗ್ರಾಮೀಣ ಚಿತ್ರಕಲೆ ಮಾಡಲಾಗಿದೆ. ಕಟ್ಟಡದ ವಿದ್ಯುತ್‍ಗೆ ಎಲ್‍ಇಡಿ ದೀಪ ಅಳವಡಿಸಲಾಗಿದೆ. ಎರೆಹುಳ ಘಟಕದಿಂದ ಬರುವ ಗೊಬ್ಬರ ಬಳಸಿ ತರಕಾರಿ ಗಿಡಗಳನ್ನು ಬೆಳೆಯಲು ಸ್ಥಳಾವಕಾಶ ಕಲ್ಪಿಸಲಾಗಿದೆ. ಸುರಕ್ಷತೆಗಾಗಿ ಕಟ್ಟಡದ ಸುತ್ತ ಆವರಣಗೋಡೆ ನಿರ್ಮಿಸಲಾಗಿದ್ದು ಮಕ್ಕಳು ಸ್ವಚ್ಛಂದವಾಗಿ ಆವರಣದೊಳಗೆ ಸಂಚರಿಸಬಹುದಾಗಿದೆ.
ಮಕ್ಕಳಿಗೆ ಆಟ ಯಾವಾಗಲು ಮೊದಲ ಪ್ರಾಶಸ್ತ್ಯ. ಈ ನಿಟ್ಟಿನಲ್ಲಿ ಅಜ್ಜಿಮನೆ ಅಂಗನವಾಡಿ ಕೇಂದ್ರದಲ್ಲಿ ಆಟವಾಡಲು ಸ್ಥಳವಕಾಶ ಹಾಗೂ ಜಾರುಬಂಡಿ ಸೇರಿದಂತೆ ಆಟದ ತಾಣಗಳನ್ನು ಅಳವಡಿಸಲಾಗಿದೆ.
ಅಜ್ಜಿಮನೆ ಅಂಗನವಾಡಿ ಕೇಂದ್ರದ ವಿನ್ಯಾಸವನ್ನು ಭರತ್‍ರಾಮ್ ಜೆಪ್ಪು, ಗ್ರೀನ್‍ಮಾರ್ಕ್ ವಾಸ್ತುಶಿಲ್ಪ ಮತ್ತು ಒಳಾಂಗಣ ವಿನ್ಯಾಸ ಇವರು  ಮಾಡಿದ್ದು, ನಿರ್ಮಿತಿ ಕೇಂದ್ರದ ಸಹಾಯಕ ಇಂಜಿನಿಯರ್ ನವಿತ್ ಇವರ ಮೇಲುಸ್ತುವಾರಿಯಲ್ಲಿ ಕಾಮಗಾರಿ ನಡೆಸಲಾಗಿದೆ. ಬೆಂಗರೆ ಅಂಗನವಾಡಿ ಕೇಂದ್ರದ ಉದ್ಘಾಟನೆ ಇತ್ತೀಚೆಗೆ ನೆರವೇರಿದ್ದು, ಕಾಟಿಪಳ್ಳ ಹಾಗೂ ಎದುರುಪದವು ಅಂಗನವಾಡಿ ಕೇಂದ್ರಗಳ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಜ್ಜಾಗಿವೆ.

 

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ