‘‘
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಬಂಟ್ವಾಳ ತಾಲೂಕಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2 ಗಂಟೆಗೆ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುಟಿ ದೈವಸ್ಥಾನಕ್ಕೆ ಭೇಟಿ ನೀಡಲಿರುವ ಅವರು, 2.30ಕ್ಕೆ ಸಜಿಪಮೂಡ ಗ್ರಾಮದ ಗಣಪತಿ ಭಟ್ ಅವರ ಕೃಷಿ ಜಮೀನಿನಲ್ಲಿ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಗೆ ಚಾಲನೆ ನೀಡುವರು. ಬಳಿಕ 3.30ಕ್ಕೆ ಬಿ.ಸಿ.ರೋಡ್ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
‘
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಚಿವ ಕೋಟ ಬಂಟ್ವಾಳಕ್ಕೆ, ಬೆಳೆ ಸಮೀಕ್ಷೆ ಮೊಬೈಲ್ ಆಪ್ ಗೆ ಚಾಲನೆ"