ಬಂಟ್ವಾಳ

ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ನಿಂದ ಬಂಟ್ವಾಳದಲ್ಲಿ ಗಿಡನೆಡುವ, ರೋಗಿಗಳಿಗೆ ಹಣ್ಣು ವಿತರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ

ಜಾಹೀರಾತು

ಯುವ ಕಾಂಗ್ರೆಸ್ ವತಿಯಿಂದ ಪೊಳಲಿ ದ್ವಾರದಿಂದ ಬಿ.ಸಿ.ರೋಡ್ ಜಂಕ್ಷನ್ ವರೆಗೆ ಗಿಡ ನೆಡುವ ಕಾರ್ಯಕ್ರಮ ನಡೆದರೆ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ. ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ವತಿಯಿಂದ ಧ್ವಜಾರೋಹಣ. ಹೀಗೆ ಬಂಟ್ವಾಳದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ನ ನಾನಾ ಘಟಕಗಳ ಮೂಲಕ ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಘಟಕಗಳಲ್ಲಿ ಧ್ವಜಾರೋಹಣ ನೆರವೇರಿತು. ಬಳಿಕ ಯುವ ಕಾಂಗ್ರೆಸ್ ವತಿಯಿಂದ ಪೊಳಲಿ ದ್ವಾರದಿಂದ ಬಿ ಸಿ ರೋಡ್ ಜಂಕ್ಷನ್ ವರಗೆ ಸಸಿ ನಡುವ ಕಾರ್ಯಕ್ರಮಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಚಾಲನೆ ನೀಡಿದರು. ಈ ಸಂದರ್ಭ  ಜಿಲ್ಲಾ ಪಂಚಾಯತ್ ಸದಸ್ಯರಾದ  ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಪುರಭಸ ಸದಸ್ಯರುಗಳಾದ ಜನಾರ್ದನ ಚಂಡ್ತಿಮಾರ್ ,ಲುಕ್ಮಾನ್, ಗಂಗಾಧರ್, ಬೂಡಾ ಮಾಜಿ ಅಧ್ಯಕ್ಷರಾದ ಸದಾಶಿವ ಬಂಗೇರ, ಮಾಜಿ ಸ್ಥಾಯಿ ಸಮಿತಿಯ ಅಧ್ಯಕ್ಷ ಮಾಧವ ಮಾವೆ, ಇಬ್ರಾಹಿಂ ನವಾಝ್ ಬಡಕಬೈಲ್ ,ಚಂದ್ರಶೇಖರ್ ಪೂಜಾರಿ ಬಾಳ್ತಿಲ ವಿಶ್ವಜಿತ್ ಶೆಟ್ಟಿ, ಸುರೇಶ್ ಜೋರ,ಮಹಮ್ಮದ್ ನಂದರಬೆಟ್ಟು, ಪವನ್ ಆಳ್ವ  ಮೊದಲಾದವರು ಉಪಸ್ಥಿತರಿದ್ದರು.

ಹಣ್ಣು ಹಂಪಲು ವಿತರಣೆ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ  ಹಣ್ಣು ಹಂಪಲು ವಿತರಿಸಲಾಯಿತು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.