ಶನಿವಾರ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ನಡೆದ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಕೊರೊನಾ ಸಂದರ್ಭ ಕಾರ್ಯಪ್ರವೃತ್ತರಾದ ನಾನಾ ಇಲಾಖೆಗಳಿಗೆ ಮತ್ತು ಆಂಬುಲೆನ್ಸ್ ಚಾಲಕರಿಗೆ ಗೌರವಾರ್ಪಣೆ ನಡೆಸಲಾಯಿತು. ಇದೇ ವೇಳೆ ಎಸ್.ಎಸ್.ಎಲ್.ಸಿ. ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸಲಾಯಿತು.
ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ರಶ್ಮಿ ಎಸ್.ಆರ್. ಸಂದೇಶ ನೀಡಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಈ ಬಾರಿ ಅನಿವಾರ್ಯ ಪರಿಸ್ಥಿತಿಯಲ್ಲಿ ಸ್ವಾತಂತ್ರ್ಯ ದಿನವನ್ನು ಸರಳ ರೀತಿಯಲ್ಲಿ ಆಚರಿಸಬೇಕಾಗಿ ಬಂದಿದ್ದು, ಕೊರೊನಾ ವಾರಿಯರ್ಸ್ ಗಳು ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದ್ದೇವೆ ಎಂದರು.
ಅಂಬ್ಯುಲೆನ್ಸ್ ಚಾಲಕರನ್ನು ಗೌರವಿಸಲಾಯಿತು. ಎಸೆಸೆಲ್ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದ ವಿದ್ಯಾರ್ಥಿನಿ ಅವ್ರಿಲ್ ಲೀವಾ ಲೂವಿಸ್ ಹಾಗೂ ಕಾಲಿನಲ್ಲಿ ಪರೀಕ್ಷೆ ಬರೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಕೌಶಿಕ್ ಆಚಾರ್ಯ ಅವರನ್ನು ಅಭಿನಂದಿಸಲಾಯಿತು. ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ಎಪಿಎಂಸಿ ಅಧ್ಯಕ್ಷ ನೇಮಿರಾಜ ರೈ, ತಾ.ಪಂ.ಇಒ ರಾಜಣ್ಣ, ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜಾ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಸಹಾಯಕ ಕೃಷಿ ನಿರ್ದೇಶಕ ನಾರಾಯಣ ಶೆಟ್ಟಿ, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಗಾಯತ್ರಿ ಕಂಬಳಿ, ನ್ಯಾಯವಾದಿ ಚಂದ್ರಶೇಖರ ಪೂಜಾರಿ ಸಹಿತ ನಾನಾ ಇಲಾಖೆಗಳ ಅಧಿಕಾರಿಗಳು ಇದ್ದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಕೊರೊನಾ ವಾರಿಯರ್ಸ್ ಗಳ ವಿವರ ನೀಡಿದರು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಬಂಟ್ವಾಳ ಪೊಲೀಸ್ ಇಲಾಖೆಯಿಂದ ಪಥಸಂಚಲನ ನಡೆಯಿತು. ಎಸ್ಸೈಗಳಾದ ಪ್ರಸನ್ನ ಮತ್ತು ಅವಿನಾಶ್ ನಿರ್ವಹಿಸಿದರು. ಬೆಸ್ಟ್ ಶಾಲಾ ಶಿಕ್ಷಕಿಯರು ರಾಷ್ಟ್ರಗೀತೆ, ನಾಡಗೀತೆ ಹಾಡಿದರು.