ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ರೈತರಿಗೆ ತಲುಪಿಸಲು ಮೊಬೈಲ್ ಆಪ್ ಪೂರಕವಾಗಿ ದ್ದು ಆವರ ಆರ್ಥಿಕ ಶಕ್ತಿಯನ್ನು ಹೆಚ್ಚಿಸಲಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು
ಅಡಕೆ ಮರ ಹತ್ತುವ ಬೈಕ್ ಆವಿಷ್ಕಾರ ಖ್ಯಾತಿಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಪ್ರಗತಿಪರ ಕೃಷಿಕ ಗಣಪತಿ ಭಟ್ ಅವರ ಮನೆಯಲ್ಲಿ ರಾಜ್ಯ ಸರಕಾರ ಹೊಸದಾಗಿ ಅನುಷ್ಠಾನಗೊಳಿಸಿರುವ ರೈತರ ಬೆಳೆ ಸಮೀಕ್ಷೆ ಮಾಡುವ ಮೊಬೈಲ್ ಆಪ್ ಗೆ ಬಂಟ್ವಾಳ ತಾಲೂಕು ಮಟ್ಟದಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಚಾಲನೆ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ, ರಾಜ್ಯ ಸರ್ಕಾರದಗಳ ಯೋಜನೆಗಳನ್ನು ರೈತರಿಗೆ ನೇರವಾಗಿ ತಲುಪಿಸಲು ಆಪ್ ಸಹಕಾರಿಯಾಗಲಿದೆ ಎಂದು ಆಶಿಸಿದರು. ಇದೇ ಸಂದರ್ಭದಲ್ಲಿ ಮೊಬೈಲ್ ಆಪ್ ಕರಪತ್ರ ಬಿಡುಗಡೆ ಗೊಳಿಸಲಾಯಿತು. ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಲಾಯಿತು. ಬಳಿಕ ಅಡಕೆ ಮರ ಹತ್ತುವ ಯಂತ್ರದ ಪ್ರಾತ್ಯಕ್ಷಿಕೆಯನ್ನು ಗಮನಿಸಿದ ಸಚಿವರು, ಅದರ ಮಾಹಿತಿಯನ್ನು ಪಡೆದರು. ಯಂತ್ರಕ್ಕೆ ಸಹಾಯಧನ ಒದಗಿಸುವ ಕುರಿತು ಪರಿಶೀಲಿಸುವುದಾಗಿ ಅವರು ಹೇಳಿದರು.
ಇದಕ್ಕೂ ಮುನ್ನ ಪಣೋಲಿಬೈಲು ಕ್ಷೇತ್ರಕ್ಕೆ ಸಚಿವರು ಭೇಟಿ ನೀಡಿದರು. ಈ ಸಂದರ್ಭ ಪ್ರಮುಖರಾದ ಬಿ. ದೇವದಾಸ ಶೆಟ್ಟಿ, ದೇವಪ್ಪ ಪೂಜಾರಿ, ಸುಲೋಚನಾ ಜಿ.ಕೆ. ಭಟ್, ಯಶವಂತ ದೇರಾಜೆ, ಶ್ರೀಕಾಂತ್ ಶೆಟ್ಟಿ ಸಂಕೇಶ, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ಪ್ರಕಾಶ್ ಅಂಚನ್, ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರವೀಣ್ ಗಟ್ಟಿ, ಯಶವಂತ ನಗ್ರಿ, ವಜ್ರನಾಥ ಕಲ್ಲಡ್ಕ, ಸೀತರಾಮ ಆಗರಿಬೆಟ್ಟು, ಲೋಹಿತ್ ಪಣೋಲಿಬೈಲು, ಮುಳ್ಳುಂಜ ವೆಂಕಟೇಶ್ವರ ಭಟ್, ರಾಜಾರಾಮ ಕಾಡೂರು, ರೊನಾಲ್ಡ್ ಡಿಸೋಜ, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಜಂಟಿ ಕೃಷಿ ನಿರ್ದೇಶಕಿ ಸೀತಾ, ತಾಪಂ ಇಒ ರಾಜಣ್ಣ, ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ನಾರಾಯಣ ಶೆಟ್ಟಿ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಪ್ರದೀಪ್ ಡಿ.ಸೋಜ, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಪಣೋಲಿಬೈಲು ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಗ್ರಾಮಕರಣಿಕರಾದ ಸ್ವಾತಿ, ಧರ್ಮಸಾಮ್ರಾಜ್ ಉಪಸ್ಥಿತರಿದ್ದರು.