ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ(ಎಸ್ ಐ ಓ) ಪಾಣೆಮಂಗಳೂರು ಶಾಖೆಯ ವತಿಯಿಂದ ಪಾಣೆಮಂಗಳೂರು ಬಸ್ ನಿಲ್ದಾಣದ ಬಳಿ ಧ್ವಜಾರೋಹಣ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಮಾಜ ಸೇವಕ ಆಶಿಕ್ ಕುಕ್ಕಾಜೆ ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಮಾತನಾಡುತ್ತಾ, ನಮ್ಮ ದೇಶದ ಸ್ವತಂತ್ರ್ಯಗೊಳ್ಳಲು ಹಿರಿಯ ನಾಯಕರು ಹಗಲಿರುಳು ಹೋರಾಡಿ ಪ್ರಾಣಾರ್ಪಣೆಗೈದಿದ್ದು ಅವರ ಶ್ರಮವು ವ್ಯರ್ಥವಾಗಿಲ್ಲ. ದೇಶದ ಅಭಿವೃದ್ಧಿಯಲ್ಲಿ ಪ್ರತಿಯೋರ್ವ ಪ್ರಜೆಯು ತಮ್ಮಿಂದಾದ ಕೊಡುಗೆಗಳನ್ನು ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಪಾಣೆಮಂಗಳೂರು ಘಟಕದ ಸಂಚಾಲಕರಾದ ಮುಖ್ತಾರ್ ಅಹ್ಮದ್‌ರವರು ಪ್ರಾಸ್ತಾವಿಕವಾಗಿ ಮಾತನಾಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಎಸ್ ಐ ಓ ನ ಹಸಿರು ಕರಾವಳಿ ಅಭಿಯಾನದ ಪ್ರಯುಕ್ತ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.
ಕೋವಿಡ್-19 ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸಲು ಎಸ್‌ಐಓ ವತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ಥಳೀಯರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು.ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸಮಾಜ ಸೇವಾ ಘಟಕದ ಅಧ್ಯಕ್ಷ ಮುಸ್ತಫಾ ಎಂ.ಹೆಚ್ ಹಾಗೂ ಎಸ್.ಐಓ ಪಾಣೆಮಂಗಳೂರು ಘಟಕಾಧ್ಯಕ್ಷ ತಮೀಝ್ ಅಲಿ, ಎಚ್ ಆರ್ ಎಸ್ ನ ಕ್ಯಾಪ್ಟನ್ ಸತ್ತಾರ್ ಗೂಡಿನಬಳಿ, ಎಸ್ ಐ ಓ ಜಿಲ್ಲಾ ಕಾರ್ಯದರ್ಶಿ ರಿಝ್ವಾನ್ ಅಝ್ಹರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಲ್ವಾನ್ ಬೋಳಂಗಡಿ ನಿರೂಪಿಸಿದರು.
Be the first to comment on "ಪಾಣೆಮಂಗಳೂರು: ಎಸ್ ಐ ಓ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ"