ಮಂಗಳೂರು ಬಿಜೈನ ಭಾರತಿ ನಗರದ ಆಡ್ ಐಡಿಯಾದಲ್ಲಿ, ಆ.20ರಂದು ಬೆಳಗ್ಗೆ 11.30ಕ್ಕೆ ಪತ್ರಕರ್ತ ಧೀರಜ್ ಪೊಯ್ಯೆಕಂಡ ಅವರ ಕಾದಂಬರಿ ‘ಮಿತಿ’ ಬಿಡುಗಡೆಯಾಗಲಿದೆ.
ಸಾಹಿತಿ ವಿವೇಕಾನಂದ ಕಾಮತ್ ಕಾದಂಬರಿಯನ್ನು ಬಿಡುಗಡೆ ಮಾಡಲಿದ್ದು, ರಶ್ಮಿ ಶರ್ಮ ಅವರು ಕಾದಂಬರಿ ಕುರಿತು ಮಾತನಾಡಲಿದ್ದಾರೆ. ಹವ್ಯಾಸಿ ಛಾಯಾಗ್ರಾಹಕರಾಗಿರುವ ಧೀರಜ್ ಪೊಯ್ಯೆಕಂಡ ಅವರು ಈವರೆಗೆ ನಾಲ್ಕು ಕಾದಂಬರಿಗಳನ್ನು ರಚಿಸಿದ್ದು, ಮಿತಿ ಮೊದಲ ಮುದ್ರಿತ ಕಾದಂಬರಿಯಾಗಿದೆ. ಕನ್ನಡಪ್ರಭ ದಿನಪತ್ರಿಕೆಯಲ್ಲಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ಐವತ್ತಕ್ಕೂ ಹೆಚ್ಚು ಸಣ್ಣ ಕಥೆಗಳನ್ನು ಬರೆದಿದ್ದು, ಕತೆ, ಕವನ, ಚುಟುಕು ರಚನೆಯಲ್ಲೂ ತೊಡಗಿಸಿಕೊಂಡಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಧೀರಜ್ ಪೊಯ್ಯೆಕಂಡ ಅವರ ‘ಮಿತಿ’ ಕಾದಂಬರಿ ಆಗಸ್ಟ್ 20ರಂದು ಬಿಡುಗಡೆ"