ಬೆಂಗಳೂರು ಹಿಂಸಾಚಾರ ಘಟನೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಸಂವಿಧಾನದ ಆಶಯವನ್ನು ಎಲ್ಲರೂ ಪಾಲಿಸಬೇಕು. ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನೋಟರಿ, ನ್ಯಾಯವಾದಿ ಎಂ.ಚಂದ್ರಶೇಖರ ಪೂಜಾರಿ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಪೊಲೀಸ್ ಠಾಣೆ, ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡಿರುವುದನ್ನು ಖಂಡಿಸಿದ್ದು, ಸಂವಿಧಾನವಿರೋಧಿ ಚಟುವಟಿಕೆಯನ್ನು ಯಾವನೊಬ್ಬ ಪ್ರಜೆಯೂ ಮಾಡಬಾರದು. ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಿಸುವ ಕೆಲಸ ನಮ್ಮದಾಗಿದೆ ಎಂದಿದ್ದಾರೆ.
IFTAAR ORGANISED BY FORMER MINISTER RAMANATHA RAI AT PANEMANGALORE (more…)