ಒಗ್ಗಟ್ಟಿನಲ್ಲಿ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಎದುರಿಸಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶೃಮಿಸಬೇಕು ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಹೇಳಿದ್ದಾರೆ.
ವಾಮದಪದವು ಶ್ರೀಗಣೇಶ ಮಂದಿರದಲ್ಲಿ ನಡೆದ ಬಿಜೆಪಿ ಸಂಗಬೆಟ್ಟು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ, ಇತ್ತೀಚಿಗೆ ನಿಧನರಾದ ದಂಡೆ ಕೃಷ್ಣ ಶೆಟ್ಟಿ ಮತ್ತು ದಿವಾಕರ ಶೆಟ್ಟಿ ಅರಳ ಅವರನ್ನು ಸ್ಮರಿಸಿ ಶ್ರದ್ದಾಂಜಲಿ ಅರ್ಪಿಸಲಾಯಿತು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಉಪಸ್ಥಿತರಿದ್ದರು. ಸಂಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೀತಾರಾಮ ಪೂಜಾರಿ ಸ್ವಾಗತಿಸಿದರು.ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ತಾಪಂ ಸದಸ್ಯ ಪ್ರಭಾಕರ ಪ್ರಭು ವಂದಿಸಿದರು.