ವಾಮದಪದವು

ಪಕ್ಷ ಗೆಲುವಿಗೆ ಶ್ರಮಿಸಿ: ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ

ಜಾಹೀರಾತು

ಒಗ್ಗಟ್ಟಿನಲ್ಲಿ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಎದುರಿಸಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶೃಮಿಸಬೇಕು ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಹೇಳಿದ್ದಾರೆ.

ಜಾಹೀರಾತು

ವಾಮದಪದವು ಶ್ರೀಗಣೇಶ ಮಂದಿರದಲ್ಲಿ ನಡೆದ ಬಿಜೆಪಿ ಸಂಗಬೆಟ್ಟು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ, ಇತ್ತೀಚಿಗೆ ನಿಧನರಾದ ದಂಡೆ ಕೃಷ್ಣ ಶೆಟ್ಟಿ ಮತ್ತು ದಿವಾಕರ ಶೆಟ್ಟಿ ಅರಳ ಅವರನ್ನು ಸ್ಮರಿಸಿ ಶ್ರದ್ದಾಂಜಲಿ ಅರ್ಪಿಸಲಾಯಿತು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಉಪಸ್ಥಿತರಿದ್ದರು. ಸಂಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೀತಾರಾಮ ಪೂಜಾರಿ ಸ್ವಾಗತಿಸಿದರು.ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ತಾಪಂ ಸದಸ್ಯ ಪ್ರಭಾಕರ ಪ್ರಭು ವಂದಿಸಿದರು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ