ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಆರೋಗ್ಯ ಹಸ್ತ ಕಾರ್ಯಕ್ರಮ ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಉದ್ಘಾಟಿಸಿದರು. ಮಾನವೀಯತೆ ದೃಷ್ಟಿಯಿಂದ ಜನರ ಸೇವೆ ಮಾಡುವ ಅವಕಾಶ ಸದುಪಯೋಗಗೊಳಿಸುವಂತೆ ಮನವಿ ಮಾಡಿದರು. ಮಾಜಿ ಸಚಿವ ರಮಾನಾಥ ರೈ ತರಬೇತುದಾರರಿಗೆ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿ ಸಾರ್ವಜನಿಕರ ಆರೋಗ್ಯ ಜತೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ವಿನಂತಿಸಿದರು.
ಡಾ. ರಾಜೇಶ್ ಪೂಜಾರಿ ಪಿ ಪಿ ಇ ಕಿಟ್ ಬಳಕೆ ಮತ್ತು ಖಾಯಿಲೆ ತಪಾಸಣೆ ಮಾಡುವ ರೀತಿಯನ್ನು ವಿವರಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎನ್. ಗಫೂರ್, ಜಿಲ್ಲಾ ತರಬೇತಿಗಾರ ರಘುರಾಜ್ ಕದ್ರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ತಾಲೂಕ್ ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಲೂಕು ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಎಂಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಇಬ್ರಾಹಿಂ ನವಾಜ್ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…