ಬಂಟ್ವಾಳ

ಜಕ್ರಿಬೆಟ್ಟು ಗಣೇಶೋತ್ಸವ ಸಮಿತಿ ಸಭೆ

ಜಾಹೀರಾತು

ಬಂಟ್ವಾಳ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮತಿ ವತಿಯಿಂದ ಶ್ರೀ ಗಣೇಶೋತ್ಸವ ಆಚರಣೆ ಬಗ್ಗೆ ಸಭೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜರಗಿತು. ಮಾಜಿ ಸಚಿವ, ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಮಾತನಾಡಿ, ಕೊರೊನಾ ಕಾರಣ ದಿಂದ ಈ ಬಾರಿ ಸರಕಾರದ ಮಾರ್ಗಸೂಚನೆ ಪ್ರಕಾರ ಸರಳವಾಗಿ ಆಚರಿಸಬೇಕಾಗಿದೆ ಎಂದರು.

ಈ ಬಾರಿ ಜಕ್ರಿಬೆಟ್ಟು ಮೈದಾನದಲ್ಲಿ ಶ್ರೀ ಗಣೇಶೋತ್ಸವ ನಡೆಸಲಾಗದ ಕಾರಣ ದೇವಸ್ಥಾನ ಅಥವಾ ಸಭಾಂಗಣದಲ್ಲಿ ಸಂಪ್ರದಾಯ ಪ್ರಕಾರ ಒಂದು ದಿನ ಮಾತ್ರ ನಡೆಸಲಾಗುವುದು ಎಂದರು. ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್,ಪದಾಧಿಕಾರಿಗಳಾದ ಪಿ.ಜಿನರಾಜ ಆರಿಗ,  ಚಂದ್ರಪ್ರಕಾಶ್ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಜನಾರ್ದನ ಚಂಡ್ತಿಮಾರ್, ಪದ್ಮನಾಭ ರೈ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪ್ರವೀಣ್ ಕಿಣಿ, ಪ್ರಶಾಂತ್ ಕುಲಾಲ್, ಸದಾಶಿವ ಬಂಗೇರ, ಮಹಾಬಲ ಬಂಗೇರ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು ಸ್ವಾಗತಿಸಿ, ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ವಾರ್ಷಿಕ ಮಹಾಸಭೆ

inauguration ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕಿನ 2023-24 ಮತ್ತು 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ…

4 minutes ago