ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಕೊಡುಗೆಯಿಂದ ಬಡವರು ಇಂದು ಸ್ವಾಭಿಮಾನಿಗಳಾಗು ಬದುಕುತ್ತಿದ್ದು, ಈಗಿನ ಸರ್ಕಾರ ಉಳ್ಳವರ ಪರವಾದ ನೀತಿಗಳನ್ನು ತಂದು ಅವರ ಆಶಯಗಳಿಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಗುರುವಾರ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ನಡೆದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು, ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಗಳು ಜನವಿರೋಧಿಯಾಗಿದೆ, ಕೊರೊನಾ ನಿರ್ವಹಣೆ ವೇಳೆ ಭ್ರಷ್ಟಾಚಾರ ನಡೆದಿದೆ, ನೆರೆ ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯವಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯರಾದ ಸಂಜೀವ ಪೂಜಾರಿ, ಮಂಜುಳಾ ಕುಶಲ ಪೆರಾಜೆ, ಧನಲಕ್ಷ್ಮೀ ಬಂಗೇರ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಫ್ಲೋಸಿ ಡಿಸೋಜ, ಜಯಂತಿ ವಿ.ಪೂಜಾರಿ, ಕಿಸಾನ್ ಘಟಕ ಜಿಲ್ಲಾಧ್ಯಕ್ಷ ಮೋಹನ ಗೌಡ ಕಲ್ಮಂಜ, ಪ್ರಮುಖರಾದ ಪದ್ಮನಾಭ ರೈ, ಸದಾಶಿವ ಬಂಗೇರ, ಚಂದ್ರಶೇಖರ ಪೂಜಾರಿ, ಚಿತ್ತರಂಜನ್ ಶೆಟ್ಟಿ, ಮೊಹಮ್ಮದ್ ನಂದಾವರ, ಮಧುಸೂಧನ ಶೆಣೈ, ಐಡಾ ಸುರೇಶ್, ಲುಕ್ಮಾನ್, ವಾಸು ಪೂಜಾರಿ, ಮಹಮ್ಮದ್ ಶರೀಫ್, ಗಂಗಾಧರ, ಆದಂ ಕುಂಞ, ವೆಂಕಪ್ಪ ಪೂಜಾರಿ, ವಿನ್ಸೆಂಟ್ ಪಿಂಟೊ, ಲೋಲಾಕ್ಷ ಶೆಟ್ಟಿ, ಮಲ್ಲಿಕಾ ಪಕ್ಕಳ ಸಹಿತ ನಾನಾ ಘಟಕಗಳ ನಾಯಕರು ಉಪಸ್ಥಿತರಿದ್ದರು.