ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ವಿಭಾಗದಿಂದ ಡಾ. ಎಸ್.ಆರ್.ರಂಗನಾಥನ್ ಜನ್ಮದಿನಾಚರಣೆ ಪ್ರಯುಕ್ತ ಗ್ರಂಥಾಲಯ ದಿನಾಚರಣೆ ನಡೆಯಿತು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಿನ್ಸಿಪಾಲ್ ಸೌಮ್ಯ ಎಚ್.ಕೆ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವುದರ ಜೊತೆಗೆ ವಾರ್ತಾ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳನ್ನು ಓದುವುದರಿಂದ ಜ್ಞಾನ ವೃದ್ಧಿಸುತ್ತದೆ ಎಂದರು. ಗ್ರಂಥಪಾಲಕರಾದ ಡಾ.ಶ್ರೀನಿವಾಸ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕರಾದ ನಸೀಮಾ ಬೇಗಂ, ಹನುಮಂತಯ್ಯ ಜಿ.ಎಚ್, ವಿನಯ್ ಎಂ.ಎಸ್, ದೇವಿಪ್ರಸಾದ್, ಕಚೇರಿ ಸಿಬ್ಬಂದಿಗಳಾದ ಪ್ರತಿಭಾ ಶೆಟ್ಟಿ, ದಕ್ಷಿತ್, ಸುಶ್ಮಿತ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…