ಬಂಟ್ವಾಳ

ಪಣೋಲಿಬೈಲ್ ಕ್ಷೇತ್ರದಲ್ಲಿ ಕಲೆಯೆರ್ಕಿ ಕಲ್ಲುರ್ಟಿ ವೀಡಿಯೋ ಆಲ್ಬಮ್ ಬಿಡುಗಡೆ

ದಕ್ಷ ಕ್ರಿಯೇಷನ್ಸ್ ಮಂಗಳೂರು ಪ್ರಸ್ತುತಿಯ ಅನಿವಾಸಿ ಭಾರತೀಯ ಪ್ರವೀಣ್ ಶೆಟ್ಟಿ ಪಿಲಾರ್ ಮೇಗಿನಮನೆ ನಿರ್ಮಾಣದಲ್ಲಿ ಉದಯೋನ್ಮುಖ ಯುವ ಗಾಯಕ ಮನೀಶ್ ಕುತ್ತಾರ್ ಧ್ವನಿ ನೀಡಿರುವ ಕಲೆಯೆರ್ಕಿ ಕಲ್ಲುರ್ಟಿ ವೀಡಿಯೋ ಆಲ್ಬಮ್ ಶನಿವಾರದಂದು ಬಂಟ್ವಾಳ ತಾಲೂಕಿನ ಪಣೋಲಿ ಬೈಲು ಕಲ್ಲುರ್ಟಿ ಕ್ಷೇತ್ರದಲ್ಲಿ ಬಿಡುಗಡೆಯಾಯಿತು.

ನಿವೃತ್ತ ಕಾರ್ಗಿಲ್ ಯೋಧ ಪ್ರವೀಣ್ ಶೆಟ್ಟಿ ಪಿಲಾರ್ ಅವರು ವೀಡಿಯೋ ಆಲ್ಬಮ್  ಬಿಡುಗಡೆ ಮಾಡಿದರು.ಈ ವೇಳೆ ಮಾತನಾಡಿದ ಅವರು ಹಿಂದೆ ಕಲಾವಿದರು ಅವಕಾಶಕ್ಕಾಗಿ ಕಾಯುವುದೋ ಅಥವಾ ಯಾರದೋ ಬೆನ್ನ ಹಿಂದೆ ಬೀಳೋ ಪರಿಸ್ಥಿತಿ ಇತ್ತು.ಆದರೆ ಇಂದು ಕಲಾವಿದರು ತಮ್ಮ ಕಲೆಯನ್ನು ಅನಾವರಣಗೊಳಿಸಲು ಇಂತಹ ಆಲ್ಬಮ್ ಗಳು ಪ್ರಮುಖ ಪಾತ್ರವಹಿಸುವುದಲ್ಲದೆ,ಇಂತಹ ಪ್ರಯತ್ನದಲ್ಲಿ ಕಲಾವಿದರು ರಾತ್ರಿ ಕಳೆದು ಹಗಲಾಗುವಾಗ ಪ್ರಸಿದ್ಧಿ ಪಡೆದಿರುವ ಉದಾಹರಣೆಗಳಿವೆ.ಬೆನ್ನು ತಟ್ಟಿ  ಹುರಿದುಂಬಿಸುವ ಜನರಿದ್ದರೆ ಬಡ ಕಲಾವಿದರ ಕಲಾ ನೈಪುಣ್ಯತೆಯು ಪ್ರಪಂಚಕ್ಕೆ ಪರಿಚಿತವಾಗಲು ಸಾಧ್ಯ ಎಂದರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್  ಮಾತನಾಡಿ ಮನೀಶ್ ಕುತ್ತಾರ್ ಏಕಲವ್ಯನ ಹಾಗೆ.ನಿರ್ದಿಷ್ಟ ಗುರುಗಳಿಲ್ಲದ ಪ್ರತಿಭೆ ಅವರದ್ದಾಗಿದೆ.ಸಾಧಕರು ,ಕಲಾವಿದರು ಯಾರೇ ಆಗಲಿ ಅವರಲ್ಲಿ ವಿದೇಯತೆ ಇರಬೇಕು ಆ ವಿದೇಯತೆಯನ್ನು ಮನೀಷ್ ಅವರು ಮೈಗೂಡಿಸಿದ್ದು ಅವರು ಉತ್ತಮ ಗಾಯಕರಾಗಿ ಪ್ರಸಿದ್ಧಿ ಪಡೆಯಲೆಂದು ಹಾರೈಸಿದರು.

ರಮೇಶ್ ಎಮ್. ಪಣೋಲಿಬೈಲು ಭಂಡಾರಮನೆ, ಅರ್ಚಕರಾದ ರಮೇಶ್ ಮೂಲ್ಯ  , ಗುಡ್ಡಮೂಲ್ಯ ಯಾನೆ ವಾಸುದೇವ್ ಮೂಲ್ಯ , ಮನೀಷ್ ಕುತ್ತಾರ್ , ಸುನಿಲ್ ಕುಮಾರ್ ,ರಜನೀಶ್ ನಾಯ್ಕ್ ಪಂಡಿತ್ ಹೌಸ್, ಪ್ರತೀಕ್  ಬಜ್ಪೆ, ಸಂತೋಷ್ ವಿಟ್ಲ, ನಿಖಿತ್  ಕುತ್ತಾರ್ ಉಪಸ್ಥಿತರಿದ್ದರು. ಮನೋಜ್ ವಾಮಂಜೂರು ಅವರು ಸ್ವಾಗತಿಸಿ ,ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ