ಜಿಲ್ಲಾ ಸುದ್ದಿ

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ, ದಕ್ಷಿಣ ಕನ್ನಡ ಜಿಲ್ಲೆಯ ವಿವರ ಇಲ್ಲಿದೆ

ಭಾರತ  ಚುನಾವಣಾ ಆಯೋಗವು ರಾಷ್ಟ್ರೀಯ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2021 ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಹೊರಡಿಸಿರುತ್ತದೆ.

ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಚಟುವಟಿಕೆಗಳು:- ಆಗಸ್ಟ್ 10 ರಿಂದ ನವೆಂಬರ್ 15 ರವರೆಗೆ ನಡೆಯಲಿದೆ.  ಕರಡು ಮತದಾರರ ಪಟ್ಟಿಯ ಪ್ರಕಟಣೆ ನವೆಂಬರ್ 16, ಹಕ್ಕು ಮತ್ತು ಆಕ್ಷೇಪಣೆಗಳನ್ನು ನವೆಂಬರ್ 16 ರಿಂದ  ಡಿಸೆಂಬರ್ 15 ರವರೆಗೆ ಸ್ವೀಕರಿಸಲಾಗುವ್ಯದು. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಜನವರಿ 5, ಅಂತಿಮ ಮತದಾರರ ಪಟ್ಟಿ ಜನವರಿ 15 ರಂದು ಪ್ರಕಟಗೊಳ್ಳಲಿದೆ.

  • ಮಂಗಳೂರು ಉತ್ತರ, ದಕ್ಷಿಣ, ಮಂಗಳೂರು, ಬಂಟ್ವಾಳ, ಮೂಡಬಿದ್ರೆ ಕ್ಷೇತ್ರಗಳಿಗೆ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್( 9900111150) ಹಾಗೂ ಬೆಳ್ತಂಗಡಿ, ಪುತ್ತೂರು, ಸುಳ್ಯ ಕ್ಷೇತ್ರಗಳಿಗೆ ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್(9535618438)  ಮತದಾರರ ನೋಂದಣಾಧಿಕಾರಿಗಳಾಗಿದ್ದಾರೆ.

ಸಹಾಯಕ ಮತದಾರರ ನೋಂದಣಾಧಿಕಾರಿಯವರ ವಿವರಗಳು ಇಂತಿವೆ:

  1. ಬೆಳ್ತಂಗಡಿ ಕ್ಷೇತ್ರ:  ತಹಶೀಲ್ದಾರರು ಬೆಳ್ತಂಗಡಿ, ಮಹೇಶ್, ಮೊಬೈಲ್ ಸಂಖ್ಯೆ:9902434583.  
  2. ಮೂಡಬಿದ್ರೆ ಕ್ಷೇತ್ರ:  ತಹಶೀಲ್ದಾರರು ಮೂಡಬಿದ್ರೆ, ಅನಿತಾಲಕ್ಷ್ಮಿ ಮೊಬೈಲ್:7042976487,
  3. ಮಂಗಳೂರು ನಗರ ಉತ್ತರ ಕ್ಷೇತ್ರ: ಸಹಾಯಕ ಮತದಾರರ ನೋಂದಣಾಧಿಕಾರಿ-ತಹಶೀಲ್ದಾರರು ಮಂಗಳೂರು ಟಿ.ಜಿ. ಗುರುಪ್ರಸಾದ್ ಮೊಬೈಲ್: 96114731433
  4. ಮಂಗಳೂರು ನಗರ ದಕ್ಷಿಣ ಕ್ಷೇತ್ರ:  ಸಹಾಯಕ ಮತದಾರರ ನೋಂದಣಾಧಿಕಾರಿ-ಕಂದಾಯ ಅಧಿಕಾರಿ ಮಹಾನಗರಪಾಲಿಕೆ ಮಂಗಳೂರು, ವಿಜಯ ಕುಮಾರ್, ಮೊಬೈಲ್: 9448177302,
  5. ಮಂಗಳೂರು ಕ್ಷೇತ್ರ:  ಸಹಾಯಕ ಮತದಾರರ ನೋಂದಣಾಧಿಕಾರಿ-ತಹಶೀಲ್ದಾರರು ಮಂಗಳೂರು ಟಿ.ಜಿ. ಗುರುಪ್ರಸಾದ್ ಮೊಬೈಲ್: 96114731433
  6. ಬಂಟ್ವಾಳ ಕ್ಷೇತ್ರ: ಸಹಾಯಕ ಮತದಾರರ ನೋಂದಣಾಧಿಕಾರಿ-ತಹಶೀಲ್ದಾರರು ಬಂಟ್ವಾಳ, ರಶ್ಮಿ ಮೊಬೈಲ್: 9972061514,
  7. ಪುತ್ತೂರು ಕ್ಷೇತ್ರ:   ಸಹಾಯಕ ಮತದಾರರ ನೋಂದಣಾಧಿಕಾರಿ-ತಹಶೀಲ್ದಾರರು ಪುತ್ತೂರು, ರಮೇಶ್ ಬಾಬು, ಮೊಬೈಲ್ :94801688694.
  8. ಸುಳ್ಯ ಕ್ಷೇತ್ರ:   ಸಹಾಯಕ ಮತದಾರರ ನೋಂದಣಾಧಿಕಾರಿ-ತಹಶೀಲ್ದಾರರು ಸುಳ್ಯ, ಅನಂತಶಂಕರ್, ಮೊಬೈಲ್: 9902541695.

ಮತದಾರರ ಪಟ್ಟಿ ಸೇರ್ಪಡೆಗೆ ಅಗತ್ಯವಿರುವ ದಾಖಲೆಗಳು:
ವಯಸ್ಸಿನ ಬಗ್ಗೆ ದಾಖಲೆಗಳು: ಶಾಲಾ ಪ್ರಮಾಣ ಪತ್ರ , ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್‍ಪೋರ್ಟು, ಎಸ್.ಎಸ್.ಎಲ್.ಸಿ/ಪಿಯುಸಿ ಅಂಕಪಟ್ಟಿ, ಪಾನ್ ಕಾರ್ಡ್ ಹಾಗೂ ವೈದ್ಯಕೀಯ ಪ್ರಮಾಣ ಪತ್ರ.
ವಾಸಸ್ಥಳದ ಬಗ್ಗೆ ದಾಖಲೆಗಳು: ಪಡಿತರ ಚೀಟಿ, ಗ್ಯಾಸ್ ಸಿಲಿಂಡರ್ ಸ್ವೀಕೃತಿ ರಶೀದಿ, ವಿದ್ಯುತ್ ಬಿಲ್ ಪಾವತಿ, ಬ್ಯಾಂಕ್ ಪಾಸ್‍ಬುಕ್, ಪಾಸ್ ಪೋರ್ಟ್, ವಾಹನ ಚಾಲನ ಪರವಾನಿಗೆ ಪ್ರತಿ, ಬಾಡಿಗೆ ಕರಾರು ಪತ್ರ ಹಾಗೂ ಇನ್ನಿತರದಾಖಲೆಗಳು. ಒಂದು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳು.
ಯಾವುದಕ್ಕೆ ಯಾವ ಅರ್ಜಿ: ನಮೂನೆ-6: 18 ವರ್ಷ ಪೂರೈಸಿದ ಹೊಸ ಮತದಾರರು ಹಾಗೂ ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದೆಡೆ ವಾಸಸ್ಥಳ ಬದಲಾಯಿಸಿದವರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು.
ನಮೂನೆ-6ಎ: ಅನಿವಾಸಿ ಭಾರತೀಯರುಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಲು, ನಮೂನೆ-7: ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲು. ನಮೂನೆ-8: ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿಗೆ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದ ದೋಷಗಳಿದ್ದರೆ ಸರಿಪಡಿಸಿಕೊಳ್ಳಲು, ಸಮೂನೆ-8ಎ: ಒಂದೇ  ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದ ಸಂದರ್ಭದಲ್ಲಿ ಸಲ್ಲಿಸಬೇಕಿರುವ ಅರ್ಜಿ.

ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಬಹುದು. ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಲ್ಲಿ  ಪರಿಶೀಲಿಸಬಹುದು.  ಮತದಾರರ ಸಹಾಯವಾಣಿ 1950 ಸಂಖ್ಯೆ ಕರೆಮಾಡಿ ಮಾಹಿತಿ ಪಡೆಯಬಹುದು. ಹಾಗೂ ಈ ಕೇಂದ್ರಗಳಿಗೆ ಭೇಟಿನೀಡಿ ಮತದಾರರ ಪಟ್ಟಿಗಳಲ್ಲಿ ಹೆಸರು ನೊಂದಾಯಿಸುವ ಬಗ್ಗೆ ತಿದ್ದುಪಡಿ ಬಗ್ಗೆ ಪರಿಶೀಲಿಸಬಹುದು ಎಂದು ದ.ಕ ಜಿಲ್ಲಾ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ