ಬಂಟ್ವಾಳ

ಪುರಸಭೆ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ, ಆಡಳಿತ ಯಂತ್ರ ಚುರುಕು: ಪೌರಾಡಳಿತ ಸಚಿವ ಡಾ. ನಾರಾಯಣ ಗೌಡ

ಜಾಹೀರಾತು

ಬಂಟ್ವಾಳ ಪುರಸಭೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ, ಅಭಿವೃದ್ಧಿ ಯೋಜನೆಗೆ ನೆರವು ನೀಡಲಾವುದು, ಶೀಘ್ರದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಯುವ ವಿಶ್ವಾಸವಿದೆ ಎಂದು ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಡಾ. ನಾರಾಯಣ ಗೌಡ ಹೇಳಿದರು.

ಪೌರಾಡಳಿತ ಸಚಿವ ಡಾ.ನಾರಾಯಣ ಗೌಡ ಬಂಟ್ವಾಳಕ್ಕೆ  ಭೇಟಿ ನೀಡಿದ ಸಂದರ್ಭ ಬಂಟ್ವಾಳ ಪುರಸಭೆಗೆ ವಿಶೇಷಾನುದಾನ ನೀಡುವಂತೆ  ಪ್ರಸ್ತಾವನೆ ಸಲ್ಲಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಅವರು, ಬಂಟ್ವಾಳಕ್ಕೆ ಬುಧವಾರ ಸಂಜೆ ಭೇಟಿ ನೀಡಿದ ವೇಳೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಜೊತೆಗೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಂಟ್ವಾಳ ಪುರಸಭೆಯ ಅಭಿವೃದ್ಧಿ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ನೀಡಿದ ಸಲಹೆಯನ್ನು ಗಮನದಲ್ಲಿರಿಸಲಾಗಿದೆ. ಪುರಸಭೆಯಲ್ಲಿ ಸಿಬ್ಬಂದಿ ಕೊರತೆಯ ಬಗ್ಗೆ ಹಿರಿಯ ಸದಸ್ಯ ಎ.ಗೋವಿಂದ ಪ್ರಭು ಗಮನ ಸೆಳೆದಿದ್ದು, ಇದನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಕೊರೊನಾ ನಿಯಂತ್ರಣಕ್ಕೆ ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರಯತ್ನಗಳು ಸಾಗಿದ್ದು, ಅದೇ ವೇಳೆ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಆಡಳಿತ ಕೆಲಸ ಮಾಡುತ್ತಿದೆ ಎಂದವರು ಹೇಳಿದರು. ಇದೇ ವೇಳೆ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಗೆ ತೋಟಗಾರಿಕಾ ಇಲಾಖೆ ಜಮೀನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದವರು ಮಾಹಿತಿ ನೀಡಿದರು. ಅಡಕೆ ಬೆಳೆ ಸಹಿತ ಪ್ರಾಕೃತಿಕ ವಿಕೋಪವುಂಟಾದಾಗ ತೋಟಗಾರಿಕೆ ಬೆಳೆಗಳಿಗೆ ದೊರಕುವ ಪರಿಹಾರ ಮೊತ್ತ ಏರಿಸುವ ಕುರಿತು ಗಮನಹರಿಸುವುದಾಗಿ ಅವರು ತಿಳಿಸಿದರು. ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ. ಭಟ್, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಪುರಸಭೆ ಹಿರಿಯ ಸದಸ್ಯ ಎ.ಗೋವಿಂದ ಪ್ರಭು, ಪ್ರಮುಖರಾದ ದೇವಪ್ಪ ಪೂಜಾರಿ, ಪ್ರಕಾಶ್ ಅಂಚನ್, ಉದಯಕುಮಾರ ರಾವ್, ಪುರುಷೋತ್ತಮ ಶೆಟ್ಟಿ, ಸುದರ್ಶನ ಬಜ, ಪ್ರಭಾಕರ ಪ್ರಭು,ಪ್ರವೀಣ್ ಗಟ್ಟಿ, ಡೊಂಬಯ್ಯ ಅರಳ, ಡಿವೈಎಸ್ಪಿ ವೆಲಂಟೈನ್ ಡಿಸೋಜ, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಉಪಸ್ಥಿತರಿದ್ದರು.

ಸಾಧಕ ಕೃಷಿಕ ಮನೆಗೆ ತೋಟಕಾರಿಕಾ ಸಚಿವ ಭೇಟಿ, ಶ್ರದ್ಧಾಂಜಲಿ

ತೋಟಗಾರಿಕಾ ಸಚಿವ ಡಾ. ಕೆ.ಸಿ. ನಾರಾಯಣ ಗೌಡ ಅವರು ಬಂಟ್ವಾಳ ಎಸ್.ವಿ.ಎಸ್.ಕಾಲೇಜು ಸಮೀಪ ಪೊಣ್ಣಂಗಿಲದಲ್ಲಿರುವ ಚಾಲ್ಸ್ ಬಾಗ್ ಗೆ ಬುಧವಾರ ಖಾಸಗಿ ಭೇಟಿ ನೀಡಿದರು. ಈ ವೇಳೆ ಕೃಷಿ ಸಾಧಕರಾಗಿದ್ದು, ಇತ್ತೀಚೆಗೆ ನಿಧನ ಹೊಂದಿದ್ದ ಚಾರ್ಲ್ಸ್ ವಿ. ಫ್ರಾಂಕ್ ಅವರಿಗೆ ಶ್ರದ್ದಾಂಜಲಿ ಅರ್ಪಿಸಿದರು.

ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ವಿದ್ಯುತ್ ನದಿನೀರು ಬಳಕೆದಾರರ ಹಿತರಕ್ಷಣಾ ಸಮಿತಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಪ್ರಗತಿಪರ ಕೃಷಿಕರಾಗಿ, ಪಶುಪಾಲನೆಯಲ್ಲೂ ನಿಷ್ಣಾತರಾಗಿದ್ದ ಚಾರ್ಲಸ್ ಫ್ರಾಂಕ್ ಅವರ ಭಾವಚಿತ್ರಕ್ಕೆ ಪುಷ್ಪವೃಷ್ಟಿಗೈದು ಭಾಷ್ಪಾಂಜಲಿ ಅರ್ಪಿಸಿದರು. ಮೃತರ ಪತ್ನಿ ಲತೀಷಿಯಾ ಫ್ರಾಂಕ್ ಮತ್ತು ಪರಿವಾರಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಈ ವೇಳೆ ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಅಧ್ಯಕ್ಷ ರೋನ್ಸ್ ಬಂಟ್ವಾಳ್, ಉದ್ಯಮಿ ರಾಜೇಶ್ ರೋಡ್ರಿಗಸ್, ರೋಬರ್ಟ್ ಡಿಸೋಜ, ವಾಲ್ಟರ್ ಪಿಂಟೋ, ಫಿಲಿಪ್ ಮಾರ್ಕ್, ಜೆಸಿಂತಾ ತಾರಾ ಆರ್. ಬಂಟ್ವಾಳ್, ಅರುಣ್ ಫ್ರಾಂಕ್, ವಿಲ್ಮಾ ರೋಷನ್, ಡೈಸಿ ಅರುಣ್ ಮತ್ತಿತರರು ಇದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago