ಜಾಹೀರಾತು
ಬಂಟ್ವಾಳ: ಬಂಟ್ವಾಳ ತಾಲೂಕಿನ ಕೊಯಿಲದಿಂದ ಸಂಗಬೆಟ್ಟುವರೆಗಿನ ರಸ್ತೆ ಕಾಮಗಾರಿಯನ್ನು ಶೀಘ್ರ ಆರಂಭಿಸುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಕೊಯಿಲದಿಂದ ಸಂಗಬೆಟ್ಟು ತನಕ ಸ್ಟೇಟ್ ಡೆವಲಪ್ ಮೆಂಟ್ ಪ್ರಾಜೆಕ್ಟ್ ಕಾರ್ಯಕ್ರಮದ ಅಡಿಯಲ್ಲಿ ನಾಲ್ಕುವರೆ ಕಿ.ಮೀ. ಉದ್ದದ ರಸ್ತೆಗೆ 12 ಕೋಟಿ ರೂಪಾಯಿ ಕಾಮಗಾರಿಗೆ ಎರಡು ವರ್ಷಗಳ ಹಿಂದೆ ಮಂಜೂರಾತಿ ದೊರಕಿತ್ತು. ಇದರ ಟೆಂಡರ್ ಅನುಮತಿಯಾಗಿ ಒಂದು ವರ್ಷ ಆಗಿದೆ. ಆದರೂ ಕಾಮಗಾರಿ ಪ್ರಾರಂಭವಾಗಿಲ್ಲ ಎಂದವರು ಗಮನ ಸೆಳೆದಿದ್ದಾರೆ. ಈ ಕುರಿತು ಅವರು ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಗೆ ಪತ್ರ ಬರೆದಿದ್ದು, ಕಾಮಗಾರಿ ಆರಂಭಗೊಳ್ಳದ ಕಾರಣ ಸಾರ್ವಜನಿಕರು ಬವಣೆಪಡುತ್ತಿದ್ದಾರೆಎಂದು ಪತ್ರದಲ್ಲಿ ನಮೂದಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕೊಯಿಲ ಸಂಗಬೆಟ್ಟು ರಸ್ತೆ ಕಾಮಗಾರಿ ಶೀಘ್ರ ಆರಂಭ: ರೈ ಒತ್ತಾಯ"