ಬಂಟ್ವಾಳ

ವಿಕಲಚೇತನರಿಗೆ ಸಾಧನಾ ಸಲಕರಣೆ ವಿತರಣೆ

ಜಾಹೀರಾತು

ಎಂ.ಆರ್.ಪಿ.ಎಲ್, ಸಿಡಿಪಿಒ ಬಂಟ್ವಾಳ ಮತ್ತು ವಿಟ್ಲ ವಿಭಾಗ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮತ್ತು ಕೃತಕ ಅಂಗಾಂಗ ತಯಾರಿಕೆ ಕಾರ್ಪೊರೇಶನ್ ಆಫ್ ಇಂಡಿಯಾ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ಬಂಟ್ವಾಳ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಬಿ.ಸಿ.ರೋಡಿನ ಸ್ತ್ರೀಶಕ್ತಿ ಸಭಾಭವನದಲ್ಲಿ 89 ವಿಕಲಚೇತನರಿಗೆ ಸಾಧನಾ ಸಲಕರಣೆಗಳನ್ನು ವಿತರಿಸಿತು.

ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ತಾಪಂ ಉಪನಿರ್ದೇಶಕ ಶಿವಾನಂದ, ಲಯನ್ಸ್ ಕ್ಲಬ್ ಅಧ್ಯಕ್ಷ ಕೃಷ್ಣಶಾಮ್, ಶ್ರೀನಿವಾಸ ಪೂಜಾರಿ ಮೇಲ್ಕಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೀತಾ, ಶಾಲಿನಿ ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕು ಪಂಚಾಯಿತಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಗಿರೀಶ್ ಕುಮಾರ್ ವಂದಿಸಿದರು. ಡಿಡಿಆರ್ ಸಿ ಅಧಿಕಾರಿ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts