ಸಾಂದರ್ಭಿಕ ಚಿತ್ರ
ಬಿಜೆಪಿ ಗೋಳ್ತಮಜಲು ಮಹಾಶಕ್ತಿ ಕೇಂದ್ರ ಅಮ್ಟೂರು ಗ್ರಾಮ ಬಿಜೆಪಿ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಆಯುಷ್ಮಾನ್ ಭಾರತ್ ನ ಕಾರ್ಡ್ ಗೆ ಉಚಿತ ನೋಂದಣಿ ಮತ್ತು ಕಾರ್ಡ್ ವಿತರಣಾ ಕಾರ್ಯಕ್ರಮ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಸೆಪ್ಟೆಂಬರ್ 6ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ತಿಳಿಸಿದ್ದಾರೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತು ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಗ್ರಾಮಸಮಿತಿ ಅಧ್ಯಕ್ಷ, ಪದಾಧಿಕಾರಿ, ಸದಸ್ಯರು ಉಪಸ್ಥಿತರಿರುವರು.
ಇದರ ಸದುಪಯೋಗ ಪಡೆಯಲು ಇಚ್ಛಿಸುವವರು ಆಧಾರ್ ಕಾರ್ಡ್ ಮತ್ತು ರೇಶನ್ ಕಾರ್ಡ್ ಕಡ್ಡಾಯವಾಗಿ ತರಬೇಕು, ಮಾಸ್ಕ್ ಕಡ್ಡಾಯ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ದಿನೇಶ್ ಅಮ್ಟೂರು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದಿನೇಶ್ ಅಮ್ಟೂರು 9482498369 ಪ್ರಭಾಕರ ಶೆಟ್ಟಿ 9844852658 ಗೋಪಾಲಕೃಷ್ಣ ಪೂವಳ 9880904627 ವೇಣುಗೋಪಾಲ್ ಶೆಟ್ಟಿಗಾರ್ 9535623504 ಅವರನ್ನು ಸಂಪರ್ಕಿಸುವಂತೆ ಅವರು ಕೋರಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…