ಬಂಟ್ವಾಳ: ಬಂಟ್ವಾಳ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳ ಘೋಷಣೆ, ಕಾರ್ಯಕಾರಿಣಿ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಉದ್ಛಾಟಿಸಿದರು. ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಮಹಿಳಾ ಮೋರ್ಚಾದ ಮಂಡಲ ಅಧ್ಯಕ್ಷರಾದ ಭಾರತಿ.ಎಸ್.ಚೌಟ, ಪ್ರಧಾನ ಕಾರ್ಯದರ್ಶಿಗಳಾದ ಸೀಮಾ ಮಾಧವ, ಶ್ರೀಲತಾ ಶೆಟ್ಟಿ , ಕರ್ನಾಟಕ ರಾಜ್ಯ ನೀರು ಸರಬರಾಜು ಯೋಜನೆ ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಶ್ರೀಮತಿ ಸುಲೋಚನ ಜಿ.ಕೆ ಭಟ್, ಜಿಲ್ಲಾ ಪ್ರಮುಖರಾದ ಪೂಜಾ ಪೈ, ಮಂದಾರತಿ ಶೆಟ್ಟಿ, ಸೇವಂತಿ ಶ್ರೀಯನ್, ರೂಪ ಉಪಸ್ಥಿತರಿದ್ದರು.
ಬಂಟ್ವಾಳದ ಕೌಶಿಕ್ ಹಾಗೂ ಕರ್ನಾಟಕ ರಾಜ್ಯ ನೀರು ಸರಬರಾಜು ಯೋಜನೆ ಮತ್ತು ಒಳಚರಂಡಿ ಮಂಡಳಿ ನಿರ್ದೇಶಕರಾದ ಸುಲೋಚನ ಜಿ.ಕೆ ಭಟ್ ಇವರನ್ನು ಅಭಿನಂದಿಸಲಾಯಿತು. ಪ್ರಧಾನ ಕಾರ್ಯದರ್ಶಿ ಸೀಮಾ ಮಾಧವ ಸ್ವಾಗತಿಸಿ, ಶ್ರೀಲತಾ ಶೆಟ್ಟಿ ವಂದಿಸಿದರು. ಮಣಿಮಾಲಾ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರದ ಉಪಾಧ್ಯಕ್ಷ ಚಿದಾನಂದ ರೈ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ, ಕಾರ್ಯದರ್ಶಿಯಾದ ಸೀತಾರಾಮ ಪೂಜಾರಿ ಉಪಸ್ಥಿತರಿದ್ದರು.