ಆನ್ ಲೈನ್ ಶಿಕ್ಷಣ ಇಂದು ಅಗತ್ಯ ಮತ್ತು ಅನಿವಾರ್ಯ ಎಂದು ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಸಹಾಯ ಪ್ರಾಧ್ಯಾಪಕರಾದ ಪ್ರೊ. ರಾಘೇಶ್ ರಾಜು ಹೇಳಿದರು.
ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ಡೆವಲಪ್ಮೆಂಟ್ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು. ಪ್ರತಿಯೊಬ್ಬ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳೂ ಈ ಶಿಕ್ಷಣ ಕ್ರಮವನ್ನು ರೂಢಿಸಿಕೊಳ್ಳಬೇಕಾದುದು ಇಂದಿನ ಅನಿವಾರ್ಯತೆಯಾಗಿದೆ ಎಂದವರು ಹೇಳಿದರು.
ಕಾಲೇಜಿನ ಪ್ರಿನ್ಸಿಪಾಲ್ ಡಾ. ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಘಟಕದ ಸಂಯೋಜಕ ಡಾ. ಟಿ.ಕೆ.ರವೀಂದ್ರನ್ ಸ್ವಾಗತಿಸಿದರು. ಐಕ್ಯೂಎಸಿ ಘಟಕದ ಸಹ ಸಂಯೋಜಕಿ ಅಖಿಲಾ ಪೈ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…