ಬಂಟ್ವಾಳ: ಮಾಣಿ ವಲಯ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಆಶ್ರಯದಲ್ಲಿ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೊಂದಾವಣಿ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಬಿ.ಎಂ. ಅಬ್ಬಾಸ್ ಅಲಿ, ತಾಲೂಕು ಪಂಚಾಯತ್ ಸದಸ್ಯರಾದ ಮಂಜುಳಾ ಕುಶಲ ಪೆರಾಜೆ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ. ವಿ ಪೂಜಾರಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ವಲಯ ಅಧ್ಯಕ್ಷರಾದ ಬಾಲಕೃಷ್ಣ ಅಳ್ವ, ರಮಣಿ ಡಿ. ಪೂಜಾರಿ, ಮಾಜಿ ಪಂಚಾಯತ್ ಅಧ್ಯಕ್ಷರಾದ ಪ್ರೀತಿ ಡಿನ್ನ ಪಿರೇರಾ, ಸುನಂದಾ, ಗ್ರಾಮ ಪಂಚಾಯತ್ ಸದಸ್ಯ ವಿಕೇಶ್ ಶೆಟ್ಟಿ, ದಯಾನಂದ ಪೂಜಾರಿ, ಹಮೀದ್ ಪಾಲ್ಕೆ, ಸೂರಿಕುಮೇರ್ ಜುಮಾ ಮಸೀದಿಯ ಅಧ್ಯಕ್ಷರಾದ ಅದ್ದುಲ್ ಕೆರೀಂ ಸೂರಿಕುಮೇರ್ ಉಪಸ್ಥಿತರಿದ್ದರು.