ವಿಟ್ಲ: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿಯಾದ ಸತೀಶ್ ಪೂಜಾರಿ ಇತ್ತೀಚಿಗೆ ನದಿಪ್ರವಾಹಕ್ಕೆ ಸಿಲುಕಿ ಮೃತಪಟ್ಟಿದ್ದು ಈ ಮನೆಗೆ ಬಂಟ್ವಾಳದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿ ಸರಕಾರದ ವತಿಯಿಂದ ರೂ.5 ಲಕ್ಷ ಪರಿಹಾರದ ಚೆಕ್‌ನ್ನು ಮೃತರ ತಂದೆ ಬಾಬು ಪೂಜಾರಿ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಕಂದಾಯ ಇಲಾಖೆಯ ಆರ್.ಐ. ದಿವಾಕರ ಮುಗುಳಿಯ, ವಿಟ್ಲಪಡ್ನೂರು ಗ್ರಾಮ ಪಂ. ಮಾಜಿ ಅಧ್ಯಕ್ಷರಾದ ಹಾಗೂ ಕ್ಷೇತ್ರದ ಬಿಜೆಪಿ ಪ್ರ.ಕಾರ್ಯದರ್ಶಿ ರವೀಶ್ ಶೆಟ್ಟಿ, ಕನ್ಯಾನ ಗ್ರಾಮ ಪಂ. ಮಾಜಿ ಅಧ್ಯಕ್ಷರಾದ ರಘುರಾಮ ಶೆಟ್ಟಿ, ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಕರೋಪಾಡಿ, ಪ್ರಮುಖರಾದ ಲೋಹಿತ್ ಕೊಳ್ನಾಡು, ಮೋಹನದಾಸ ಶೆಟ್ಟಿ, ಚಂದ್ರಶೇಖರ ಪೂಜಾರಿ, ಗ್ರಾಮ ಸಹಾಯಕ ಪರಮೇಶ್ವರ್ ಉಪಸ್ಥಿತರಿದ್ದರು.
Be the first to comment on "ನದಿಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಮನೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ, ಚೆಕ್ ವಿತರಣೆ"