ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಲೈನ್ ಶಿಫ್ಟಿಂಗ್ ಕೆಲಸ ಇರುವ ಕಾರಣ, ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ನೀರು ಪೂರೈಕೆ ಸೆ.2ರಂದು ವ್ಯತ್ಯಯವಾಗಲಿದೆ ಎಂದು ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿ.ಕಸ್ಬಾ, ಬಿ.ಮೂಡ, ಪಾಣೆಮಂಗಳೂರು ಗ್ರಾಮದಲ್ಲಿ ನೀರು ಪೂರೈಕೆ ಇರುವುದಿಲ್ಲ ಎಂದಿದ್ದಾರೆ.